ಶನಿವಾರ, ಮೇ 8, 2021
22 °C
ಪಾಕ್ ಪ್ರಧಾನಿಯಾಗಿ ನವಾಜ್ ಷರೀಫ್ ಪ್ರಮಾಣ ವಚನ ಇಂದು

ಭಾರತಕ್ಕೆ ಆಹ್ವಾನ ನೀಡದ ಪಾಕಿಸ್ತಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):ಪಾಕಿಸ್ತಾನದ ಪ್ರಧಾನಿಯಾಗಿ ನವಾಜ್ ಷರೀಫ್ ಬುಧವಾರ ಇಸ್ಲಾಮಾಬಾದ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಭಾರತದ ರಾಜಕಾರಣಿಗೆ ಅಧಿಕೃತ ಆಹ್ವಾನ ಬಂದಿಲ್ಲ. ಹೀಗಾಗಿ, ಪಾಕಿಸ್ತಾನದಲ್ಲಿ ಭಾರತದ ಹೈ ಕಮಿಷನರ್ ಆಗಿರುವ ಶರತ್ ಸಭರವಾಲ್ ಅವರನ್ನು ಹೊರತುಪಡಿಸಿ ಸರ್ಕಾರದ ಪ್ರತಿನಿಧಿಯಾಗಿ ಬೇರೆ ಯಾರೂ ಪಾಲ್ಗೊಳ್ಳುವುದಿಲ್ಲ.`ಬುಧವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅಲ್ಲಿನ ಸ್ಥಳೀಯ ಕಾರ್ಯಕ್ರಮ' ಎಂದು ವ್ಯಾಖ್ಯಾನಿಸಿರುವ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್, `ಸಮಾರಂಭದಲ್ಲಿ ಭಾಗಿಯಾಗುವಂತೆ ನಮಗೆ ಯಾವುದೇ ಆಹ್ವಾನ ಬಂದಿಲ್ಲ' ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.ನವದೆಹಲಿಗೆ ಬಂದಿದ್ದ ಸಭರ್‌ವಾಲ್ ಅವರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಂಗಳವಾರ ಬೆಳಿಗ್ಗೆ ಸೂಚಿಸಲಾಗಿದ್ದು, ಅವರು ಆ ರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದೂ ಸಲ್ಮಾನ್ ಖುರ್ಷಿದ್ ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.