ಮಂಗಳವಾರ, ಫೆಬ್ರವರಿ 18, 2020
29 °C

ಭಾರತದ ಅಧಿಪತ್ಯವನ್ನು ಪಾಕ್‌ ಒಪ್ಪುವುದಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌ (ಐಎಎನ್‌ಎಸ್‌): ಉಪ ಖಂಡದಲ್ಲಿ ಭಾರತದ ಅಧಿಪತ್ಯವನ್ನು ಪಾಕಿಸ್ತಾನ  ಎಂದಿಗೂ ಅಂಗೀಕರಿಸುವುದಿಲ್ಲ ಎಂದು ಪಾಕಿಸ್ತಾನದ ಭದ್ರತಾ ಸಲಹೆಗಾರ ಸರ್‌ತಾಜ್‌ ಅಜಿಜ್‌ ತಿಳಿಸಿದ್ದಾರೆ.

ಪಾಕಿಸ್ತಾನ ಪರಮಾಣು ಶಕ್ತಿಯಲ್ಲಿ ಸ್ವಾವಲಂಬನೆ ಸಾಧಿಸಿರುವುದರಿಂದ ಭಾರತದ ಕನಸು ನುಚ್ಚು ನೂರಾಗಿದೆ ಎಂದರು.

ಲಾಹೋರ್‌ನಲ್ಲಿರುವ ನಜಾರಿಯಾ ಸಂಶೋಧನಾ ಕೇಂದ್ರದಲ್ಲಿ ಅವರು ಮಾತನಾಡುತ್ತಿದ್ದರು. ಭಾರತ 1998 ರಲ್ಲಿ ಅಣ್ವಸ್ತ್ರ ಪ್ರಯೋಗ ನಡೆಸಿದ ಬೆನ್ನಲ್ಲೇ. ಪಾಕಿಸ್ತಾನ ಸಹ ಅಣ್ವಸ್ತ್ರ ಪ್ರಯೋಗ ನಡೆಸಿತು ಎಂದರು.

ಪಾಕಿಸ್ತಾನದ ರಕ್ಷಣಾ ವ್ಯವಸ್ಥೆಯನ್ನು ನಾವು ಮತ್ತಷ್ಟು ಬಲಪಡಿಸಬೇಕು. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳು ಸಂಶೋಧನೆ ನಡೆಸಬೇಕು ಎಂದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)