ಶನಿವಾರ, ಏಪ್ರಿಲ್ 17, 2021
27 °C

ಭಾರತದ ಇಂಧನ ಅಗತ್ಯ ಯುರೇಷಿಯಾದತ್ತ ಚಿತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಶಾಂಬೆ (ಪಿಟಿಐ): ಹೆಚ್ಚುತ್ತಿರುವ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಯುರೇಷಿಯಾ ಹೊಂದಿದ್ದು ಅದನ್ನು  ಅಗತ್ಯಗಳಿಗೆ ತಕ್ಕಂತೆ ಪೂರಕವಾಗಿ ಬಳಸಿಕೊಳ್ಳಬೇಕಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.ಯುರೇಷಿಯಾ ರಾಷ್ಟ್ರಗಳ ನೆರವು ಪಡೆದು ಅಗಾಧ ನೈಸರ್ಗಿಕ ಸಂಪನ್ಮೂಲಗಳನ್ನು ರಾಷ್ಟ್ರದ ಆರ್ಥಿಕ ಬೆಳವಣಿಯ ಸಾಧನಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅವರು ಭಾರತದ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಸಲಹೆ ಮಾಡಿದರು.ಹನ್ನೊಂದು ರಾಷ್ಟ್ರಗಳಲ್ಲಿರುವ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಭಾಗವಹಿಸಿದ್ದ 6ನೇ ಪ್ರಾದೇಶಿಕ ಸಮಾವೇಶದಲ್ಲಿ ಮಾತನಾಡಿದ ಅವರು, `ವಾಣಿಜ್ಯ, ಸಾರಿಗೆ ಸಂಪರ್ಕ, ಸಮುದಾಯ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಸಂಬಂಧಿಸಿದಂತೆ ಮಧ್ಯ ಏಷ್ಯ ರಾಷ್ಟ್ರಗಳ ಜತೆ ಭಾರತ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದುವುದು ಅಗತ್ಯ~ ಎಂದು ಪ್ರತಿಪಾದಿಸಿದರು.ಮುಂಬರುವ ದಿನಗಳಲ್ಲಿ ಈ ಪ್ರದೇಶ ಭಾರತೀಯ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸದ ತಾಣವಾಗುವ ಅಲ್ಲ ಅರ್ಹತೆಗಳನ್ನು ಹೊಂದಿದೆ ಎಂದು ಕೃಷ್ಣ ಹೇಳಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.