ದಾವಣಗೆರೆ: ಭಾರತದಲ್ಲಿ ನಡೆಯುತ್ತಿರುವ ಮಹಾ ಚುನಾವಣೆಯು ಇಡೀ ಜಗತ್ತಿಗೆ ಮಾದರಿ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ.ಚಂದ್ರಮಲ್ಲೇಗೌಡ ಅಭಿಪ್ರಾಯ ಪಟ್ಟರು. ಜಿಲ್ಲಾ ಚುನಾವಣಾ ಆಯೋಗ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ನಡೆದ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಾರ್ವಜನಿಕರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೇಶದ ಪ್ರಜಾಪ್ರಭುತ್ವವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬೇಕು. ಚುನಾವಣೆಯ ಮತದಾನದಂದು ನೀವು ಚಲಾಯಿಸುವ ನಿಮ್ಮ ಒಂದು ಅಮೂಲ್ಯವಾದ ಮತ ಅಪರಾಧಿಗಳು, ಲೂಟಿಕೋರರಿಗೆ, ಭ್ರಷ್ಟಾಚಾರಿಗಳಿಗೆ ಪಾಠವಾಗಿ ಪರಿಣಮಿಸಬೇಕು’ ಎಂದು ಕಿವಿಮಾತು ಹೇಳಿದರು.

ಆಯ್ಕೆ ಮಾಡುವ ಜನಪ್ರತಿನಿಧಿಯು ನಿರಂತರವಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಸಾಮಾಜಿಕ ಕಳಕಳಿ ಹೊಂದಿರಬೇಕು. ಅಂತಹ ಅರ್ಹ ವ್ಯಕ್ತಿಯ ಆಯ್ಕೆ ನಿಮ್ಮ ಕೈಯಲ್ಲಿದೆ ಎಂದು ತಿಳಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಎಸ್.ಟಿ. ಅಂಜನ್ಕುಮಾರ್ ಮಾತನಾಡಿ, ಗ್ರಾಮೀಣ ಅಮಾಯಕ ಜನತೆಯ ಮುಗ್ಧತೆಯನ್ನು ಉಪಯೋಗಿಸಿಕೊಂಡು ದಾರಿ ತಪ್ಪಿಸುವ ರಾಜಕಾರಣಿಗಳನ್ನು ದೂರವಿರಿಸುವ ಕಾರ್ಯ ನಿಮ್ಮಂತಹ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಬಿ.ಹೇಮಚಂದ್ರ ಮಾತನಾಡಿ, ಸದೃಢ ಹಾಗೂ ಸುಭದ್ರ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬ ಪ್ರಜೆಯೂ ಮತದಾನದಲ್ಲಿ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಕರೆ ನೀಡಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ವಿಶ್ವನಾಥ್ ಮುದ್ದಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶಿವರುದ್ರಪ್ಪ, ಜಿಲ್ಲಾ ವಾರ್ತಾಧಿಕಾರಿ ಎಸ್.ಮಹೇಶ್ವರಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.