ಶನಿವಾರ, ಮೇ 28, 2022
29 °C

`ಭಾರತದ ಸಂಬಂಧಕ್ಕೆ ಪಾಕ್ ತೀವ್ರ ಆಸಕ್ತಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪಾಕಿಸ್ತಾನದ ನೂತನ ಪ್ರಧಾನಿ ನವಾಜ್ ಷರೀಫ್ ಅವರ ವಿಶೇಷ ಪ್ರತಿನಿಧಿ ಶಹರೈರ್ ಎಂ.ಖಾನ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಭಾರತದ ಜತೆಗಿನ ಸಂಬಂಧ ಸುಧಾರಣೆಗೆ ತಮ್ಮ ದೇಶ ತೀವ್ರ ಆಸಕ್ತಿ ಹೊಂದಿದೆ ಎಂದು ತಿಳಿಸಿದ್ದಾರೆ.ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ನೀಡಿದ ಪ್ರಶಂಸೆಯ ಪತ್ರವನ್ನು ಸಿಂಗ್ ಅವರಿಗೆ ಹಸ್ತಾಂತರಿಸಿದರು ಎಂದು ಪಾಕಿಸ್ತಾನದ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ. ಪಾಕಿಸ್ತಾನ ಜತೆಗಿನ ಸಂಬಂಧ ಕುರಿತು ಪ್ರಧಾನಿ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.ರಾಷ್ಟ್ರೀಯ ರಕ್ಷಣಾ ಸಲಹೆಗಾರ ಶಿವಶಂಕರ್ ಮೆನನ್ ಹಾಗೂ ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್ ಅವರನ್ನು ಖಾನ್ ಭೇಟಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.