ಬುಧವಾರ, ನವೆಂಬರ್ 20, 2019
27 °C

ಭಾರತೀಯ ಪತ್ರಿಕಾ ಮಂಡಳಿ ಅಧ್ಯಕ್ಷ ಕಟ್ಜು ವಜಾಕ್ಕೆ ಆಗ್ರಹ

Published:
Updated:

ಲಖನೌ (ಐಎಎನ್‌ಎಸ್): ಮಾರ್ಕಂಡೇಯ ಕಟ್ಜು ಅವರನ್ನು ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಇಲ್ಲಿಯ ಸಾಮಾಜಿಕ ಕಾರ್ಯಕರ್ತರು ರಾಷ್ಟ್ರಪತಿ ಮತ್ತು ಪ್ರಧಾನಿ ಅವರಿಗೆ ಪತ್ರ ಬರೆದು ಆಗ್ರಹಪಡಿಸಿದ್ದಾರೆ.ಹೇಯ ಅಪರಾಧಗಳನ್ನು ಎಸಗಿದವರನ್ನು ಸಮರ್ಥಿಸಿಕೊಳ್ಳುತ್ತಿರುವ ಕಟ್ಜು ಅವರನ್ನು ಪತ್ರಿಕಾ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನೂತನ್ ಠಾಕೂರ್ ಮತ್ತು ದೇವೇಂದ್ರ ದೀಕ್ಷಿತ್ ಒತ್ತಾಯಿಸಿದ್ದಾರೆ.ಕಟ್ಜು ಅವರು ಕೇಂದ್ರ ಸರ್ಕಾರದಿಂದ ಸಂಬಳ ಪಡೆಯುತ್ತಿರುವುದರಿಂದ ಭಯೋತ್ಪಾದಕರು, ಗಂಭೀರ ಸ್ವರೂಪದ ಅಪರಾಧಗಳನ್ನು ಎಸಗಿದವರನ್ನು ಸಮರ್ಥಿಸುವ ಮೂಲಕ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಆಪಾದಿಸಲಾಗಿದೆ.

ಪ್ರತಿಕ್ರಿಯಿಸಿ (+)