ಭಾರತೀಯ ಮಹಿಳೆಯರಲ್ಲಿ ರಕ್ತಹೀನತೆ

7

ಭಾರತೀಯ ಮಹಿಳೆಯರಲ್ಲಿ ರಕ್ತಹೀನತೆ

Published:
Updated:

ನವದೆಹಲಿ: ಭಾರತದಲ್ಲಿ ಮಹಿಳೆಯರು ಹೆಚ್ಚಾಗಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ.  ಪ್ರಮುಖವಾಗಿ ಪರಿಶಿಷ್ಟ ಪಂಗಡದ ಮಹಿಳೆಯರಲ್ಲಿ ಈ ರಕ್ತಹೀನತೆಯ ರೋಗ ಇನ್ನಷ್ಟು ಹೆಚ್ಚಿದೆ ಎನ್ನಲಾಗಿದೆ.ಯೋಜನಾ ಆಯೋಗ ತಯಾರಿಸಿರುವ ಭಾರತೀಯ ಮಾನವ ಸಂಪನ್ಮೂಲ ಅಭಿವೃದ್ಧಿ ವರದಿ-2011ರಲ್ಲಿ ಈ ಅಂಶವನ್ನು ಹೇಳಲಾಗಿದೆ.1998-99 ರಿಂದ 2005-06ರ ಅವಧಿಯಲ್ಲಿ ಭಾರತೀಯ ಮಹಿಳೆಯರಲ್ಲಿ ಹೆಚ್ಚುತ್ತಿರುವ ರಕ್ತಹೀನತೆ ಪ್ರಮಾಣ ಶೇ 3ರಷ್ಟು ಹೆಚ್ಚಳವಾಗಿದೆ.ಸಾಮಾಜಿಕ ಗುಂಪುಗಳಲ್ಲಿ ರಕ್ತಹೀನತೆಯ ತುಲನೆ ಮಾಡಿದಾಗ, ಪರಿಶಿಷ್ಟ ಪಂಗಡದ ಮಹಿಳೆಯರು ಹೆಚ್ಚಾಗಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎನ್ನುವ ಅಂಶವೂ ವರದಿಯಲ್ಲಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry