ಸೋಮವಾರ, ಮೇ 23, 2022
30 °C

ಭಾರತೀಯ ಸಂಸ್ಕೃತಿ ಕೊಡುಗೆ ಅಪಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ಮನಕುಲದ ಶಾಂತಿ, ನೆಮ್ಮದಿಗೆ ಭಾರತೀಯ ಸಂಸ್ಕೃತಿ ಕೊಡುಗೆ ಅಪಾರ ಎಂದು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅಭಿಪ್ರಾಯಪಟ್ಟರು.ಪಟ್ಟಣದಲ್ಲಿ ಸೋಮವಾರ ಮಹಾ ಗಣಪತಿ, ಅಟವೀಶ್ವರಸ್ವಾಮಿ, ಸಿದ್ದೇಶ್ವರರ ನೂತನ ಶಿಲಾ ವಿಗ್ರಹಗಳ ಪ್ರತಿಷ್ಠಾಪನೆ, ಶಿಖರ ಕುಂಬಾಭಿಷೇಕ ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭ ಹಾಗೂ ಬಸವ ಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.ರಾಜಕೀಯ ಪರಿಸ್ಥಿತಿ ಸಮಾಧಾನವಿಲ್ಲದ ವಾತಾವರಣ ಸೃಷ್ಟಿಸಿದೆ. ಆರ್ಥಿಕವಾಗಿ ಮುಂದುವರೆದ ರಾಷ್ಟ್ರವಾಗುವ ದಿಸೆಯಲ್ಲಿ ನಮ್ಮ ಸಂಸ್ಕೃತಿ ಮರೆಯುವ ಪ್ರವೃತ್ತಿ ಬೆಳೆಯುತ್ತಿದೆ. ಸೃಷ್ಟಿಯಲ್ಲಿನ ಸಂಪತ್ತನ್ನು ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಧಾರ್ಮಿಕ ಸೇವೆಗಳಲ್ಲಿ ತೊಡಗುವ ಮೂಲಕ ಶಾಂತಿ ನೆಮ್ಮದಿ ಜೀವನಕ್ಕಾಗಿ ಶ್ರಮಿಸುವಂತೆ ಸಲಹೆ ನೀಡಿದರು.ಶಾಸಕ ಬಿ.ಬಿ.ರಾಮಸ್ವಾಮಿಗೌಡ ಮಾತನಾಡಿ, ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-48ರ ವಿಸ್ತರಣೆ ಹಿನ್ನೆಲೆಯಲ್ಲಿ ನಾಲ್ಕು ದೇವಾಲಯ ಸ್ಥಳಾಂತರಿಸಲಾಗಿದ್ದು, ಪುನರ್ ನಿರ್ಮಾಣ ಮಾಡಲಾಗುತ್ತಿದೆ. ಈ ಕಾರ್ಯದಿಂದ ಧಾರ್ಮಿಕ ಚಟುವಟಿಕೆ ಹೆಚ್ಚಿ ಜನರ ಮಾನಸಿಕ ನೆಮ್ಮದಿಗೆ ಸಹಕಾರಿಯಾಗಲಿ ಎಂದರು.ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹುಲಿಯೂರುದುರ್ಗ ಸಿದ್ಧಗಂಗಾ ಮಠದ ಸಿದ್ಧಲಿಂಗ ಶಿವಾನಂದ ಸ್ವಾಮೀಜಿ, ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ, ಕಗ್ಗೆರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ, ತಾಲ್ಲೂಕು ಸಮಿತಿ ಗೌರವಾಧ್ಯಕ್ಷ ಸಿದ್ದರಾಜು, ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ಚಂದ್ರಶೇಖರಯ್ಯ, ಕಾರ್ಯದರ್ಶಿ ಚಂದ್ರಶೇಖರ್, ವಿ.ವಿ.ಆರಾಧ್ಯ, ಖಜಾಂಚಿ ಕೆ.ಆರ್.ಶಿವಪ್ರಕಾಶ್ ಇತರರು ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.