ಸೋಮವಾರ, ಮೇ 23, 2022
20 °C

ಭಾರತ ಅತ್ಯಂತ ಸ್ನೇಹಮಯಿ ರಾಷ್ಟ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಭಾರತಕ್ಕೆ `ಅತ್ಯಂತ ಸ್ನೇಹಮಯಿ ರಾಷ್ಟ್ರ~ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಖರ್ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ.

ರಾಷ್ಟ್ರೀಯ ಸಭೆಯ (ಪಾಕ್ ಸಂಸತ್‌ನ ಕೆಳಮನೆ) ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಾಕ್- ಭಾರತ ದ್ವಿಪಕ್ಷೀಯ ಒಪ್ಪಂದದ ಅನೇಕ ವಿಷಯಗಳಲ್ಲಿ ಯಶ ಸಾಧಿಸಲಾಗಿದೆ. ಎರಡು ವರ್ಷಗಳ ಬಳಿಕ ಉಭಯ ದೇಶಗಳ ನಡುವೆ ಮಾತುಕತೆ ಆರಂಭವಾಗಿದೆ ಎಂದಿದ್ದಾರೆ. ಆದರೆ, ಭಾರತಕ್ಕೆ ಈ ಸ್ಥಾನಮಾನ ನೀಡುವ ನಿರ್ಧಾರ ಕಾರ್ಯರೂಪಕ್ಕೆ ಬರುವ ಕುರಿತು ಅವರು ಯಾವುದೇ ವಿವರಣೆ ನೀಡಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.