ಶಿರಸಿ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಉತ್ತರ ಕನ್ನಡ ಜಿಲ್ಲೆಯ ಜನರಿಗೆ ತಲುಪಿಸಲು ನಗರದ ವಿಕಾಸಾಶ್ರಮ ಮೈದಾನದಲ್ಲಿ ಮೂರು ದಿನಗಳ ‘ಭಾರತ ನಿರ್ಮಾಣ’ ಮಾಹಿತಿ ಆಂದೋಲನ ಪ್ರಾರಂಭವಾಗಿದೆ. ಜನಪರ ಯೋಜನೆಗಳ ಕುರಿತು ಫಲಾನುಭವಿಗಳಲ್ಲಿ ಅರಿವು ಮೂಡಿಸುವಿಕೆ ಕಾರ್ಯಕ್ರಮದ ಪ್ರಮುಖ ಉದ್ದೇಶ.

ಕರ್ನಾಟಕ ಕೃಷಿ ಮಾರಾಟ ಮಂಡಳಿ, ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆ, ಮಂಗಳೂರಿನ ಸೇನಾ ನೇಮಕಾತಿ ಕಚೇರಿ, ಕೃಷಿ ವಿಮಾ ಕಂಪನಿ, ಕರ್ನಾಟಕ ಹಾಲು ಮಹಾಮಂಡಳಿ ಸೇರಿದಂತೆ ರೈತರಿಗೆ ಮಾಹಿತಿ ಒದಗಿಸುವ ವಿವಿಧ ಇಲಾಖೆಗಳ 37 ಮಳಿಗೆ, ಸ್ವಸಹಾಯ ಗುಂಪುಗಳ ಮಳಿಗೆಗಳು ಸೇರಿದಂತೆ 48ರಷ್ಟು ಮಳಿಗೆಗಳು ವಸ್ತು ಪ್ರದರ್ಶನದಲ್ಲಿವೆ.

ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭಾನುವಾರ ಭಾರತ ನಿರ್ಮಾಣ ಕಾರ್ಯಕ್ರಮ ಉದ್ಘಾಟಿಸಿದರು. ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಅಶೀಸರ ಮಾತನಾಡಿ ‘ಕೇಂದ್ರ ಸರ್ಕಾರದಲ್ಲಿ ಅನೇಕ ಯೋಜನೆಗಳಿದ್ದರೂ ನಮ್ಮ ಜಿಲ್ಲೆಗೆ ಶಿಕ್ಷಣ, ಇನ್ನಿತರ ಕೆಲವೇ ಇಲಾಖೆ ಹೊರತುಪಡಿಸಿ ಉಳಿದ ಕಾರ್ಯಕ್ರಮಗಳು ತಲುಪುತ್ತಿಲ್ಲ’ ಎಂದರು.

ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಪ್ರೆಸ್ ಇನ್ಫಾರ್ಮೇಶನ್ ಬ್ಯುರೋದ ಹೆಚ್ಚುವರಿ ಮಹಾನಿರ್ದೇಶಕ ಎಂ.ವಿ.ವಿ.ಎಸ್. ಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಆರ್.ಡಿ. ಹೆಗಡೆ, ಶೋಭಾ ನಾಯ್ಕ, ಉಷಾ ಹೆಗಡೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಮಂಗಲಾ ಭಟ್ಟ, ನಗರಸಭೆ ಅಧ್ಯಕ್ಷ ರವಿ ಚಂದಾವರ, ಸಹಾಯಕ ಆಯುಕ್ತ ಜಿ.ಜಗದೀಶ ಉಪಸ್ಥಿತರಿದ್ದರು. ಪಿಬಿಐ ಉಪನಿರ್ದೇಶಕಿ ಪಲ್ಲವಿ ಚಿಣ್ಯ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.