ಮಂಗಳವಾರ, ಮೇ 18, 2021
31 °C

ಭಾರಿ ಮಳೆ: ಒಂಬತ್ತು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೋರ್ಟ್-ಅ-ಪ್ರಿನ್ಸ್/ ಹೈಟಿ(ಎಪಿ): ಇಲ್ಲಿನ ಹಿಸ್ಪಾನಿಯೋಲದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂ ಕುಸಿತದಿಂದ ಸುಮಾರು 9ಮಂದಿ ಸತ್ತಿದ್ದು, ಹನ್ನೊಂದು ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ ಎಂದು ಹೈಟಿ ನಾಗರಿಕ ಸಂರಕ್ಷಣಾ ಕಚೇರಿಯ ಅಧಿಕಾರಿಗಳು ಹೇಳಿದ್ದಾರೆ. ಹೈಟಿಯಲ್ಲಿ 2010ರಲ್ಲಿ ಸಂಭವಿಸಿದ ಭೂಕಂಪದಲ್ಲಿ ಐದು ಲಕ್ಷಕ್ಕೂ ಅಧಿಕ  ಮಂದಿ ನಿರ್ವಸಿತರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.