ಭಾರೀ ಮಳೆ ಸಾಧ್ಯತೆ

ಬುಧವಾರ, ಜೂಲೈ 17, 2019
25 °C

ಭಾರೀ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಪ್ರದೇಶ ,ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ  8 ಸೆಂ.ಮೀ ಮಳೆಯಾಗಿದೆ.  ಕಾರವಾರ 7, ಮಂಕಿ, ಹೊಸಕೋಟೆ 6, ಬೆಳ್ತಂಗಡಿ, ಅಂಕೋಲಾ 4, ಉಡುಪಿ, ಗೋಕರ್ಣ, ಮಂಚಿಕೇರಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ 3, ಹೊನ್ನಾವರ, ಕದ್ರಾ, ಭಾಲ್ಕಿ, ಗುರುಮಿಟ್ಕಲ್, ಚಿಕ್ಕಬಳ್ಳಾಪುರದಲ್ಲಿ 2 ಸೆಂ.ಮೀ ಮಳೆಯಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ  ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry