ಬುಧವಾರ, ಜೂನ್ 23, 2021
23 °C

ಭಾಲ್ಕಿ ಅಭಿವೃದ್ಧಿಗೆ ₨5 ಕೋಟಿ: ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಭಾಲ್ಕಿ ಪಟ್ಟಣದಲ್ಲಿನ ಮೂಲ ಸೌಕರ್ಯಗಳ ಅಭಿವೃದ್ಧಿಗೆ  ₨5ಕೋಟಿ ಮಂಜೂರಾಗಿದೆ. ಇದರಲ್ಲಿ 7 ಕಾಮಗಾರಿಗಳು ಸೇರಿವೆ. ಶೀಘ್ರ ಕಾಮಗಾರಿ  ಆರಂಭಗೊಳ್ಳಲಿವೆ ಎಂದು ಶಾಸಕ ಈಶ್ವರ ಖಂಡ್ರೆ ತಿಳಿಸಿದರು.ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಶುಕ್ರವಾರ ನಗರೋತ್ಥಾನ ಯೋಜನೆಯ ಎರಡನೇ  ಹಂತದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ತಾಲ್ಲೂಕಿನ ವಿವಿಧೆಡೆ ಹಾಳಾಗಿರುವ ರಸ್ತೆ ಅಭಿವೃದ್ಧಿಗೂ ಮುಖ್ಯಮಂತ್ರಿಗಳು ಸಾಕಷ್ಟು ಅನುದಾನ ಬಿಡುಗಡೆ ಮಾಡುವ ವಿಶ್ವಾಸವಿದೆ. ಮಾರ್ಚ್‌ ತಿಂಗಳಲ್ಲಿ ಎಲ್ಲಾ ರಸ್ತೆಗಳ ದುರಸ್ತಿ ಕಾರ್ಯಗಳು ಆರಂಭಗೊಳ್ಳಲಿವೆ ಎಂದರು. ಜಿಲ್ಲಾಧಿಕಾರಿ ಡಾ.ಪಿ.ಸಿ ಜಾಫರ್‌ ಮಾತನಾಡಿ, ಸರ್ಕಾರದ ಯೋಜನೆ­ಗಳು ಅನುಷ್ಠಾನಗೊಳ್ಳುವಾಗ ಸಾರ್ವ­ಜನಿಕರು ಗುಣಮಟ್ಟದ ಕಡೆಗೆ ಗಮನ ನೀಡಬೇಕು. ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡಬಾರದು ಎಂದರು. ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಪುರಸಭೆ ಸದಸ್ಯ ರಾಜಕುಮಾರ ವಂಕೆ, ವಿಶ್ವನಾಥ ಮೋರೆ, ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಪವನಕುಮಾರ, ಸೋಮನಾಥಪ್ಪ ಅಷ್ಟೂರೆ, ಜಮೀಲ್ ಅಹಮ್ಮದ್‌, ಅನಿಲಕುಮಾರ ಸುಂಟೆ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.