ಭಾಷಣದ ವೇಳೆ ಕುಸಿದು ಬಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಿದ ನಂತರ ಭಾಷಣ ಮಾಡುತ್ತಿದ್ದ ವೇಳೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕಾಗೋಡು ಅವರು 15 ನಿಮಿಷಗಳ ಕಾಲ ಭಾಷಣ ಮಾಡಿದ್ದರು. ಅನಂತರ ತೀವ್ರ ಅಸ್ವಸ್ಥರಾಗಿದ್ದು ಅಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದೊತ್ತಡ ಏರು ಪೇರಾಗಿದ್ದರಿಂದ ಕಾಗೋಡು ಅಸ್ವಸ್ಥರಾಗಿದ್ದಾರೆ. ಗಾಬರಿ ಪಡುವ ಅಗತ್ಯವೇನಿಲ್ಲ. ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
‘ನನಗೆ ಏನೂ ಅಗಿಲ್ಲ. ಬಿಸಿಲಿದ್ದುದರಿಂದ ಸುಸ್ತಾಯ್ತು. ಸ್ವಲ್ಪ ಸಮಯ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದು ಕೆಲಸಕ್ಕೆ ಮರಳುತ್ತೇನೆ’ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.