ಬೆಂಗಳೂರು: `ನಿಗದಿತ ಪ್ರಮಾಣದಲ್ಲಿ ಅಲ್ಪಸಂಖ್ಯಾತರಿಗೆ ಸೀಟುಗಳನ್ನು ನೀಡದ ರಾಜ್ಯದ ಎಂಟು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಲೂ ಸರ್ಕಾರ ಹಿಂಜರಿಯುವುದಿಲ್ಲ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಸೋಮವಾರ `ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ವಿಧೇಯಕ-2013' ಕುರಿತ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ರಾಜ್ಯದಲ್ಲಿ 13 ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಇವೆ. ಈ ಪೈಕಿ ಐದು ಧಾರ್ಮಿಕ ಅಲ್ಪಸಂಖ್ಯಾತ ಸಂಸ್ಥೆಗಳಿಂದ ಸಣ್ಣಪುಟ್ಟ ತಪ್ಪುಗಳು ಆಗಿವೆ. ಎಂಟು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಸರಿಯಾಗಿ ಸೀಟು ಮೀಸಲಿರಿಸಿಲ್ಲ. ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ವೆಂಕಟರಾಮಯ್ಯ ಸಮಿತಿಯಲ್ಲೂ ವಿಸ್ತೃತ ವಿವರಗಳು ಇವೆ. ಈ ಪ್ರವೃತ್ತಿಗೆ ನಿಯಂತ್ರಣ ಹೇರಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ' ಎಂದು ಹೇಳಿದರು.

`ಇಲಾಖೆಯಲ್ಲಿ ಬಹಳ ನ್ಯೂನತೆ ಇದೆ. ಸರ್ಕಾರಿ ಕೋಟಾದಲ್ಲಿ ಉಳಿಕೆಯಾದ ಸೀಟುಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕೆ ವಾಪಸ್ ಮಾಡುತ್ತಿಲ್ಲ. ಕೊನೆಯ ಕ್ಷಣದವರೆಗೂ ಖಾಲಿ ಸೀಟುಗಳನ್ನು ಉಳಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಉಭಯ ಸದನಗಳ ಹಿರಿಯ ಸದಸ್ಯರ ಸಲಹೆ ಪಡೆದು ಇದಕ್ಕೆ ಕಡಿವಾಣ ಹಾಕಲಾಗುವುದು' ಎಂದರು.

ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಮಾತನಾಡಿ, `ಖಾಸಗಿ ಶಿಕ್ಷಣ ಸಂಸ್ಥೆಗಳು ಗ್ರಂಥಾಲಯ ಶುಲ್ಕ, ಕ್ರೀಡಾ ಶುಲ್ಕ, ಗುರುತಿನ ಚೀಟಿ ಶುಲ್ಕ ಸೇರಿದಂತೆ ಬೇರೆ ಬೇರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸುತ್ತಿವೆ. ಈಗಾಗಲೇ ಖಾಸಗಿ ಕಾಲೇಜುಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮತ್ತೊಮ್ಮೆ ಚರ್ಚೆ ನಡೆಸಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲಾಗುವುದು' ಎಂದು ಭರವಸೆ ನೀಡಿದರು.

`ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕೆ ವಾಪಸ್ ಮಾಡುತ್ತಿಲ್ಲ. ಅಲ್ಪಸಂಖ್ಯಾರ ಶಿಕ್ಷಣ ಸಂಸ್ಥೆಗಳು ತಮ್ಮ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸೀಟುಗಳನ್ನು ನೀಡುತ್ತಿಲ್ಲ. ರಾಜ್ಯದ ಮಕ್ಕಳಿಗೆ ಮೀಸಲಾದ ಸೀಟನ್ನು ದುಬಾರಿ ಬೆಲೆಗೆ ಅನಿವಾಸಿ ಭಾರತೀಯರ ಮಕ್ಕಳಿಗೆ ಮಾರಾಟ ಮಾಡುತ್ತಾರೆ' ಎಂದು ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಗಮನ ಸೆಳೆದರು.

ಬಿಜೆಪಿಯ ಗೋ. ಮಧುಸೂದನ್, `ವೈದ್ಯಕೀಯ ಶಿಕ್ಷಣದ ಸ್ನಾತಕೋತ್ತರದ ಪದವಿಯ ಜನರಲ್ ಸರ್ಜರಿ ಸೇರಿದಂತೆ ಬೆಲೆಬಾಳುವ ಸೀಟುಗಳನ್ನು ಖಾಸಗಿ ಸಂಸ್ಥೆಗಳಿಗೆ ನೀಡಲಾಗುತ್ತಿದೆ. ಪ್ರತಿವರ್ಷ ಅಧಿಕಾರಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಒಪ್ಪಂದ ಮಾಡಿಕೊಳ್ಳುತ್ತಿವೆ. ಸರ್ಕಾರಿ ಕೋಟಾಕ್ಕೆ ಪ್ರಮುಖ ಕೋರ್ಸ್ಗಳು ಬರಬೇಕು' ಎಂದು ಮನವಿ ಮಾಡಿದರು. ನಂತರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ವಿಧೇಯಕ-2013ಕ್ಕೆ ಅಂಗೀಕಾರ ನೀಡಲಾಯಿತು.

ಲಿವಿಂಗ್ ಟುಗೆದರ್
ವೈದ್ಯಕೀಯ/ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ಗಳ ಪ್ರವೇಶ ಶುಲ್ಕ ಮತ್ತು ಸೀಟು ಹಂಚಿಕೆಯನ್ನು ಖಾಸಗಿ ಕಾಲೇಜುಗಳು ಮತ್ತು ಸರ್ಕಾರ ಪರಸ್ಪರ ಮಾತುಕತೆ ಮೂಲಕವೇ ನಿಗದಿಪಡಿಸಿಕೊಂಡಿರುವುದು `ಲಿವಿಂಗ್ ಟುಗೆದರ್' ನಂತೆ ಆಗಿದೆ. ಸರ್ಕಾರ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಜತೆಗೂಡಿ ಪೋಷಕರು ಹಾಗೂ ಮಕ್ಕಳಿಗೆ ಟೋಪಿ ಹಾಕುತ್ತಿವೆ.
-ಎಂ.ಸಿ.ನಾಣಯ್ಯ (ಜೆಡಿಎಸ್)

ದುಪ್ಪಟ್ಟು ವಸೂಲಿ
ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ನಿಗದಿಪಡಿಸಿದ್ದಕ್ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುತ್ತಿವೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು.
-ನಾರಾಯಣಸ್ವಾಮಿ (ಬಿಜೆಪಿ)

ಮಾಫಿಯಾ
ಉನ್ನತ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪ್ರಭಾವಿ ಮಾಫಿಯಾ ಬೇರೂರಿದೆ. ಸರ್ಕಾರಕ್ಕೆ ಇದನ್ನು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ವೃತ್ತಿ ಶಿಕ್ಷಣ ಕೋರ್ಸ್ಗಳ ಕುರಿತ ಒಪ್ಪಂದದ ಪರಿಣಾಮಕಾರಿ ಅನುಷ್ಠಾನಕ್ಕೆ ವಿಶ್ರಾಂತ ಕುಲಪತಿ ನೇತೃತ್ವದಲ್ಲಿ ಸಮಿತಿ ರಚಿಸಿದರೆ ಕುರಿ ಕಾಯಲು ತೋಳ ಬಿಟ್ಟಂತೆ ಆಗುತ್ತದೆ.
-ಬಿ.ಜೆ.ಪುಟ್ಟಸ್ವಾಮಿ (ಬಿಜೆಪಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.