ಭಾಷೆ ಬೆಳೆಯಲು ಬಳಕೆ ಮುಖ್ಯ
ಮಂಡ್ಯ: ಮನುಷ್ಯನಿಗೆ ಹಣ, ಆಸ್ತಿಗಿಂತ ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕೇಂದ್ರ ಆರಂಭಿಸಿರುವುದು ಶ್ಲಾಘನೀಯ ಎಂದು ಸಂಸದ ಎನ್. ಚಲುವರಾಯಸ್ವಾಮಿ ಹೇಳಿದರು.
ತಾಲ್ಲೂಕಿನ ಬಸರಾಳು ಹೋಬಳಿಯ ಬೇಬಿ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರಿಗೂ ಆರೋಗ್ಯ ಸೇವೆ ದೊರೆಯಲಿ ಎಂಬ ಉದ್ದೇಶದಿಂದ ಮಂಡ್ಯದ ವೈದ್ಯಕೀಯ ಕಾಲೇಜು ಆರಂಭಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ದೊರಕುತ್ತಿದ್ದು, ಅದನ್ನು ಒಂದು ಸಾವಿರ ಹಾಸಿಗೆಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ, ಉತ್ತಮ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಗ್ರಾಮದ ಎರಡು ಎಕರೆ ಸರ್ಕಾರಿ ಭೂಮಿಯನ್ನು ಆರೋಗ್ಯ ಕೇಂದ್ರ ಸ್ಥಾಪನೆಗೆ ಮೀಸಲಿಡಲಾಗಿದೆ. ತಮ್ಮ ಎಲ್ಲಾ ರೀತಿಯ ಸಮಸ್ಯೆಗಳ ಪರಿಹಾರಕ್ಕೆ ತಮ್ಮನ್ನು ಖುದ್ದಾಗಿ ಭೇಟಿ ಮಾಡಬಹುದು ಎಂದರು. ಶಾಸಕ ಎಂ.ಶ್ರೀನಿವಾಸ್, ಜಿ.ಪಂ. ಅಧ್ಯಕ್ಷೆ ನಾಗರತ್ನ ಬಸವರಾಜು, ಉಪಾಧ್ಯಕ್ಷ ಡಾ.ಎಸ್.ಸಿ.ಶಂಕರೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಮಾದಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.