ಭಾಷೆ ರಕ್ಷಣೆಗೆ ಮುಂದಾಗಲು ಸಲಹೆ

ತಲಘಟ್ಟಪುರ: `ಪ್ರತಿ ವ್ಯಕ್ತಿ ಸಹ ಗ್ರಾಮೀಣ ಸಂಸ್ಕೃತಿ, ನೆಲ, ಜಲ, ಭಾಷೆಯನ್ನು ರಕ್ಷಣೆ ಮಾಡಲು ಮುಂದಾಗಬೇಕು~ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀರವಿಶಂಕರ್ ಸಲಹೆ ನೀಡಿದರು.
ಕಗ್ಗಲೀಪುರದಲ್ಲಿ ಜೈಭುವನೇಶ್ವರಿ ಗೆಳೆಯರ ಬಳಗದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಕಗ್ಗಲೀಪುರ ಉತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ವಸತಿ ಮಹಾಮಂಡಲದ ಉಪಾಧ್ಯಕ್ಷ ಎಸ್.ಟಿ.ಸೋಮಶೇಖರ್, ಜಿ.ಪಂ.ಸದಸ್ಯೆ ಮಂಜುಳ ಅಶ್ವತ್ಥನಾಯ್ಕ, ತಾ.ಪಂ.ಸದಸ್ಯೆ ಎಲ್ಲಮ್ಮ ನಾರಾಯಣಸ್ವಾಮಿ, ಗ್ರಾ.ಪಂ.ಅಧ್ಯಕ್ಷೆ ಮಂಜುಳಾಶ್ಯಾಮ್ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.