ಬೆಂಗಳೂರು: `ಕಂದಾಯ ಇಲಾಖೆಯ ಭೂಮಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು' ಎಂದು ಆಗ್ರಹಿಸಿ ನೇಮಕಾತಿಗೊಂಡ ಭೂಮಾಕಪರು ಒಂದೆಡೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ `ಈ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದನ್ನು ಸಿಐಡಿ ತನಿಖೆಗೆ ವಹಿಸಬೇಕು' ಎಂದು ಸರ್ಕಾರದ ಪರವಾನಗಿ ಹೊಂದಿದ ಭೂಮಾಪಕರು ಭಿಕ್ಷೆ ಬೇಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಹೊಸದಾಗಿ ನೇಮಕಾತಿಗೊಂಡ ಅಭ್ಯರ್ಥಿಗಳು ನಗರದ ಭೂಮಾಪನ ಇಲಾಖೆ ಕಚೇರಿ ಸಮೀಪ ಪ್ರತಿಭಟನೆ ನಡೆಸಿ, `ಭೂಮಾಪಕರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ವರ್ಷಗಳು ಕಳೆದಿವೆ. ಆದರೆ, ಸರ್ಕಾರದಿಂದ ಈವರೆಗೂ ಅಧಿಕೃತ ಆದೇಶ ಪತ್ರ ಬಂದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.

`ಸರ್ಕಾರ ಎರಡು ವರ್ಷಗಳ ಹಿಂದೆ 1,834 ಭೂಮಾಪರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿತ್ತು. ಈ ಪೈಕಿ 1,704 ಸ್ಥಾನಗಳಿಗೆ ಮಾತ್ರ ನೇಮಕಾತಿ ನಡೆದಿದೆ. ಆದರೆ, ಆದೇಶ ಪ್ರತಿ ಇನ್ನೂ ಕೈಸೇರದ ಕಾರಣ ಅಭ್ಯರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ನಗರದ ಬನಪ್ಪ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಲಾಗಿದ್ದು, ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ' ಎಂದು ಹೋರಾಟ ಸಮಿತಿ ಸದಸ್ಯ ರಾಜೇಂದ್ರ ತಿಳಿಸಿದರು.

ಭಿಕ್ಷೆ ಬೇಡಿ ಪ್ರತಿಭಟನೆ: ಇನ್ನೂ ಕೆ.ಆರ್.ವೃತ್ತ ಸಮೀಪದ ಭೂ ಮಾಪನಾ ಇಲಾಖೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸರ್ಕಾರದ ಪರವಾನಗಿ ಪಡೆದ ಭೂಮಾಪಕರು, `ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು' ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಮುಖಂಡ ಲೋಕೇಶ್ ಮಾತನಾಡಿ, `ನ್ಯಾಯಾಲಯದ ಆದೇಶದ ಅನ್ವಯ ಒಂದು ಪ್ರಕರಣಕ್ಕೆ ಅಳತೆ ಶುಲ್ಕ 300 ರಿಂದ 2,000 ರೂಪಾಯಿಗೆ ಹೆಚ್ಚಳ ಮಾಡಬೇಕು. ಜತೆಗೆ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸಿದ್ದಕ್ಕೆ ಗೌರವ ಧನ ಬಿಡುಗಡೆ ಮಾಡದೆ ತಡೆ ಹಿಡಿಯಲಾಗಿದೆ. ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಬೇಡಿಕೆಗಳು ಈಡೇರಿಸಿದರೆ ಮಾತ್ರ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ. ಇಲ್ಲದಿದ್ದಲ್ಲಿ ಹಂತ ಹಂತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.