ಬೆಂಗಳೂರು: ನಗರ ಜಿಲ್ಲೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳ ಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 1 ಹಾಗೂ ತಾಲ್ಲೂಕು ಕಚೇರಿಗಳಲ್ಲಿ ತಲಾ 1 ರಂತೆ 5 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 080-22240614, ಬೆಂಗಳೂರು ಉತ್ತರ : 080-22232050, ಬೆಂಗಳೂರು ಉತ್ತರ (ಹೆಚ್ಚುವರಿ): 080-28560696, 28560763, ಬೆಂಗಳೂರು ದಕ್ಷಿಣ: 080-22223152, ಬೆಂಗಳೂರು ಪೂರ್ವ: 080-25619385, 25614626, ಆನೇಕಲ್: 9535113676 ಆಗಿರುತ್ತದೆ ಎಂದು ವಿವರಿಸಿದರು. ಭಿತ್ತಿಪತ್ರ, ಕಟೌಟ್, ಬೋರ್ಡ್ ಇತ್ಯಾದಿಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಭೆ ಸಮಾರಂಭಗಳಿಗೆ ಸಂಬಂಧಪಟ್ಟಂತೆ ಚುನಾವಣಾಧಿಕಾರಿ, ಪೊಲೀಸ್, ಸಾರಿಗೆ, ಸ್ಥಳೀಯ ಪ್ರಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದರು.

ರಾಜ್ಯ ಚುನಾವಣಾ ಆಯೋಗವು ಮಡಿಕೇರಿ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟಾಚಲಪತಿ ಅವರೂ ಸಹ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.