ಶನಿವಾರ, ಜೂನ್ 19, 2021
26 °C

ಭುಟ್ಟೊ ಹತ್ಯೆ: ಮುಷರಫ್ ವಿಚಾರಣೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಬೆನಜಿರ್ ಭುಟ್ಟೊ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಏಪ್ರಿಲ್ 9ರ ವರೆಗೆ  ಮುಂದೂಡಿ ಗುರುವಾರ ಆದೇಶ ಹೊರಡಿಸಿದೆ.ಅರ್ಜಿಗೆ ಉತ್ತರ ನೀಡಲು ಮುಷರಫ್ ಅವರ ವಕೀಲರು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನ ತ್ರಿ ಸದಸ್ಯ ಪೀಠದ ಮುಖ್ಯ ನ್ಯಾಯಮೂರ್ತಿ ಇಫ್ತಿಕಾರ್ ಚೌಧರಿ ಈ ಆದೇಶ ಹೊರಡಿಸಿದರು.2007ರ ಡಿಸೆಂಬರ್ 27ರಂದು ನಡೆದ ಭುಟ್ಟೊ ಹತ್ಯೆಗೆ ಸಂಬಂಧಿಸಿದಂತೆ ಮುಷರಫ್ ಮತ್ತು ಇತರರ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಿಕೊಳ್ಳಬೇಕೆಂದು ಬೆನಜಿರ್ ಅವರ ಶಿಷ್ಟಾಚಾರ ಅಧಿಕಾರಿಯಾಗಿದ್ದ ಅಸ್ಲಂ ಚೌಧರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರಿಂದಾಗಿ ಕೋರ್ಟ್‌ಗೆ ಹಾಜರಾಗುವಂತೆ ಮುಷರಫ್‌ಗೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ, ಮುಷರಫ್ ಕೋರ್ಟ್‌ಗೆ ಗೈರು ಹಾಜರಾಗಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.