ಭಾನುವಾರ, ಏಪ್ರಿಲ್ 11, 2021
32 °C

ಭೂಕಂಪದಿಂದ ದೇಶಕ್ಕೆ ತೀವ್ರ ಹಾನಿ - ಜಪಾನ್ ಪ್ರಧಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ (ಐಎಎನ್ಎಸ್): ಜಪಾನಿನಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಭೂಕಂಪದಿಂದ ತೀವ್ರ ಹಾನಿಯಾಗಿದೆ ಎಂಬುದನ್ನು ಜಪಾನ್ ಪ್ರಧಾನಿ ನ್ಯಾಟೊ ಕಾನ್ ಅವರು ಒಪ್ಪಿಕೊಂಡಿದ್ದಾರೆ.

ಭೂಕಂಪ ಹಾಗೂ ಸುನಾಮಿಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ದೇಶ ಶಕ್ತವಾಗಿದೆ ಎಂದಿರುವ ಅವರು ಈಗಾಗಲೇ ಕಾರ್ಯಪಡೆಯನ್ನು ರಚಿಸಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದಿದ್ದಾರೆ.

ದೇಶದ ಪರಮಾಣು ಸ್ಥಾವರಗಳು ಸುರಕ್ಷಿತವಾಗಿದ್ದು, ಯಾವುದೇ ಆತಂಕವಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.