ಗುರುವಾರ , ಮೇ 6, 2021
32 °C

ಭೂಕಂಪ: ಸೈನಿಕರಿಗೆ ಗಾಯ, ಸೇನಾ ಬಂಕರ್‌ಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಭಾನುವಾರ ಸಂಜೆ ಸಂಭವಿಸಿದ ಭಾರಿ ಭೂಕಂಪದಿಂದಾಗಿ ಸಿಕ್ಕಿಂನಲ್ಲಿ ಸೇನಾ ಬಂಕರ್‌ಗಳಿಗೆ ಹಾನಿಯಾಗಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.ಪೂರ್ವ ಸಿಕ್ಕಿಂನಲ್ಲಿನ ಭಾರತ-ಚೀನಾ ಗಡಿಯಲ್ಲಿ ನಿಯೋಜಿಸಲ್ಪಟ್ಟಿದ್ದ, ಸೇನಾ ಬಂಕರ್‌ಗಳು ಭೂಕಂಪಕ್ಕೆ ಸಿಕ್ಕು ಹಾನಿಗೀಡಾಗಿವೆ. ಇದರಲ್ಲಿದ್ದ ಹಲವಾರ ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ತಕ್ಷಣವೇ ಕಾರ್ಯಪ್ರವೃತ್ತರಾದ ರಕ್ಷಣಾ ತಂಡ ಹೆಲಿಕಾಪ್ಟರ್‌ಗಳ ಮೂಲಕ ಗಾಯಗೊಂಡ ಸೈನಿಕರನ್ನು ರಕ್ಷಿಸಲು ತೊಡಗಿದ್ದಾರೆ. ಈ ಪ್ರದೇಶದಲ್ಲಿ ಸರಿಸುಮಾರು 2 ನಿಮಿಷಗಳ ಕಾಲ ಭೂಮಿ ನಡುಗಿತ್ತೆಂದು ತಿಳಿದುಬಂದಿದೆ.ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.