ಶುಕ್ರವಾರ, ಮೇ 7, 2021
26 °C

ಭೂಚೇತನ: ಅಧಿಕಾರಿಗಳಿಗೆ ತರಬೇತಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಭೂಚೇತನ ಕಾರ್ಯಕ್ರಮಅಡಿಯಲ್ಲಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಸಕಾಲದಲ್ಲಿ ಒದಗಿಸಲು ರೈತ ಅನುವುಗಾರರು ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಎಚ್ಚರವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಆರ್.ವೆಂಕಟೇಶ್ ವಿನಂತಿಸಿದರು.ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಭೂಚೇತನ ಕಾರ್ಯಕ್ರಮದಡಿಯಲ್ಲಿ ರೈತ ಅನುವುಗಾರರು ಹಾಗೂ ಕೃಷಿ ಇಲಾಖಾ ವಿಸ್ತರಣಾಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರೈತರಿಗೆ ಕೇವಲ ಯೋಜನೆಯ ಸಲವತ್ತುಗಳ ಬಗೆಗೆ ಮಾಹಿತಿ ನೀಡಿದರೆ ಸಾಲದು. ರಾಸಾಯನಿಕಗಳ ಬಳಕೆ, ಮಣ್ಣಿನ ಫಲವತ್ತತೆ ರಕ್ಷಣೆ ಸೇರಿದಂತೆ ಬೀಜೋಪಾಚಾರ ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳ ಕುರಿತು ಅಗತ್ಯ ತರಬೇತಿ ನೀಡಬೇಕು ಎಂದು ಅವರು ಕೋರಿದರು.ಕೃಷಿ ಸಹಾಯಕ ನಿರ್ದೇಶಕರಾದ ಡಾ.ಕೆ.ಸಿ.ಸುಷ್ಮಾ, ಕೆ.ಆರ್.ರವೀಂದ್ರ, ಶ್ರೀನಿವಾಸ ಶೆಟ್ಟಿ ಮಾತನಾಡಿದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಭುವನೇಶ್ವರಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಹೋಬಳಿ ಮಟ್ಟದ ಕೃಷಿ ಸಹಾಯಕ ಅಧಿಕಾರಿಗಳಾದ ರವಿ, ರಂಗಸ್ವಾಮಿ, ಮಂಜುನಾಥ್, ಪುಟ್ಟೇಗೌಡ, ಕೃಷ್ಣೇಗೌಡ, ರೇಣುಕಮ್ಮ, ರಾಮೇಗೌಡ, ಅನುಪಮಾ ಸೇರಿದಂತೆ ತಾಲ್ಲೂಕಿನ ವಿವಿಧೆಡೆಗಳಿಂದ ಆಗಮಿಸಿದ ರೈತ ಅನುವುಗಾರರು ತರಬೇತಿಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.