ಭೂಮಾಪಕರ ಸತ್ಯಾಗ್ರಹ ಅಭ್ಯರ್ಥಿ ಅಸ್ವಸ್ಥ

ಸೋಮವಾರ, ಜೂಲೈ 22, 2019
27 °C

ಭೂಮಾಪಕರ ಸತ್ಯಾಗ್ರಹ ಅಭ್ಯರ್ಥಿ ಅಸ್ವಸ್ಥ

Published:
Updated:

ಬೆಂಗಳೂರು: ಕಂದಾಯ ಇಲಾಖೆಯ ಭೂಮಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿ ನಗರದ ಬನಪ್ಪ ಉದ್ಯಾನದಲ್ಲಿ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಭ್ಯರ್ಥಿಗಳ ಪೈಕಿ ಅರುಣ್ ಕುಮಾರ್ ಎಂಬುವರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಭಾನುವಾರ ಅಸ್ವಸ್ಥಗೊಂಡಿದ್ದ ವೇಣುಗೋಪಾಲ್, ಮುರಳಿ, ಸುನಿಲ್ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.`ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆಯ ಬಗ್ಗೆ ಗಮನ ಹರಿಸುತ್ತಿಲ್ಲ. ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ವರ್ಷ ಕಳೆದರೂ ಈ ವರೆಗೆ ನೇಮಕಾತಿ ಆದೇಶ ನೀಡಿಲ್ಲ. ಸೋಮವಾರ ಭೂಮಾಪನ ಇಲಾಖೆಯ ಜಂಟಿ ನಿರ್ದೇಶ ಬಸವರಾಜ್ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದ್ದಾರೆ. ಸರ್ಕಾರ ನೇಮಕಾತಿ ಆದೇಶ ನೀಡುವವರೆಗೂ ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಳ್ಳುವುದಿಲ್ಲ' ಎಂದು ಪ್ರತಿಭಟನಾನಿರತ ಶಿವನಗೌಡ `ಪ್ರಜಾವಾಣಿ'ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry