ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿವಿಧ ಕಂಪೆನಿ, ಸಂಸ್ಥೆಗಳಿಗೆ ನೀಡುವ ಭೂಮಿಯನ್ನು ಎರಡು ವರ್ಷಗಳಲ್ಲಿ ಬಳಸಿಕೊಳ್ಳದಿದ್ದರೆ ಸರ್ಕಾರ ವಾಪಸ್ ಪಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೋಮವಾರ ವಿಧಾನ ಸಭೆಯಲ್ಲಿ ತಿಳಿಸಿದರು.

ವಿರೋಧ ಪಕ್ಷದ ಉಪ ನಾಯಕ ಟಿ.ಬಿ.ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ‘ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ನೀಡುವುದಿಲ್ಲ. ಯಾವ ಉದ್ದೇಶಕ್ಕಾಗಿ ಭೂಮಿ ನೀಡಲಾಗುತ್ತದೊ, ಆ ಉದ್ದೇಶಕ್ಕೆ ಎರಡು ವರ್ಷಗಳಲ್ಲಿ ಬಳಸಿಕೊಳ್ಳಬೇಕು. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ವಾಪಸ್ ಪಡೆಯುತ್ತೇವೆ. ಈಗಾಗಲೇ 480 ಎಕರೆಯನ್ನು ಹಿಂದಕ್ಕೆ ಪಡೆಯಲಾಗಿದೆ’ ಎಂದರು.

2010ರ ಜೂನ್ನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 389 ಯೋಜನೆಗಳ ಜಾರಿ ಸಂಬಂಧ ಒಪ್ಪಂದ ಮಾಡಿಕೊಂಡಿದ್ದು, 4.95 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಲಿದೆ. ಇದುವರೆಗೆ 14 ಯೋಜನೆಗಳು ಅನುಷ್ಠಾನಗೊಂಡಿವೆ. 201 ಯೋಜನೆಗಳು ವಿವಿಧ ಹಂತಗಳಲ್ಲಿವೆ. ಇವುಗಳಿಂದ 2.81 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಲಿದ್ದು, ಐದು ಲಕ್ಷ ಜನರಿಗೆ ಉದ್ಯೋಗ ಸಿಗಲಿದೆ ಎಂಬುದಾಗಿ ಹೇಳಿದರು.

ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುವ ಕಂಪೆನಿಗಳಿಗೆ ಭೂಮಿ, ನೀರು ಇತ್ಯಾದಿ ಮೂಲಸೌಕರ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ. ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 18 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ. ಮೂರು ವರ್ಷದಲ್ಲಿ 12 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಕೈಗಾರಿಕೆಗಳಿಗೆ ಮೂರು ಸಾವಿರ ಮೆಗಾವಾಟ್ ವಿದ್ಯುತ್ ಸಾಕಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.