ಭೂಷಣ್ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

7

ಭೂಷಣ್ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

Published:
Updated:

ನವದೆಹಲಿ (ಐಎಎನ್ಎಸ್): ಹಿರಿಯ ವಕೀಲ, ಅಣ್ಣಾ ತಂಡದ ಸದಸ್ಯ ಪ್ರಶಾಂತ್ ಭೂಷಣ್ ಅವರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಒಳಗಾದ ಮೂವರು  ಆರೋಪಿಗಳನ್ನು ಶುಕ್ರವಾರ ದೆಹಲಿ ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಇಂದರ್ ವರ್ಮಾ, ವಿಷ್ಣು ಗುಪ್ತಾ ಮತ್ತು ತೆಜೇಂದರ್ ಪಾಲ್ ಸಿಂಗ್ ಬಗ್ಗಾ ಎಂಬ ಈ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿ ಆದೇಶ ಹೊರಡಿಸಿದೆ. ಆರೋಪಿಗಳನ್ನು ಗುರುವಾರ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಪ್ರಶಾಂತ್ ಭೂಷಣ್ ಅವರ ಮೇಲೆ ಹಲ್ಲೆ ಮಾಡಿದ್ದ ದಿನ ಬುಧವಾರದಂದೇ ಆರೋಪಿಗಳಲ್ಲೊಬ್ಬನಾದ  ವರ್ಮಾನನ್ನು ಪೊಲೀಸರು ಬಂಧಿಸಿದ್ದರು. ಉಳಿದ ಇಬ್ಬರು ಆರೋಪಿಗಳು ಗುರುವಾರ ತಾವೇ ಬಂದು ಪೊಲೀಸರಿಗೆ ಶರಣಾಗಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry