ಬುಧವಾರ, ಮೇ 25, 2022
22 °C

ಭೂಹಕ್ಕು ಪತ್ರಗಳಿಗೆ ರೈತರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಬಗರ್‌ಹುಕುಂ ಸಾಗುವಳಿ ರೈತರಿಗೆ ಬಗರ್‌ಹುಕುಂ ಸಮಿತಿಯ ಮುಖಾಂತರ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಕೋರಿ ಕರ್ನಾಟಕ ಭೂಹಕ್ಕುದಾರರ ವೇದಿಕೆ ಸದಸ್ಯರು ಇತ್ತೀಚೆಗೆ ಶಾಸಕ ಕೆ.ಪಿ.ಬಚ್ಚೇಗೌಡ ಅವರಿಗೆ ಮನವಿಪತ್ರ ಸಲ್ಲಿಸಿದರು.ನಗರದ ಶಾಸಕರ ಭವನದಲ್ಲಿ ಮನವಿ ಪತ್ರ ಸಲ್ಲಿಸಿದ ಬಳಿಕ ವೇದಿಕೆ ಅಧ್ಯಕ್ಷ ಎಂ.ಕೃಷ್ಣಪ್ಪ ಮಾತನಾಡಿ, `ಹಲವು ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಬಗರ್‌ಹುಕುಂ ಭೂಮಿ ಸಾಗುವಳಿ ಮಾಡಿ ಕೊಂಡು ಬದುಕುತ್ತಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಕಂದಾಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 6,759ಕ್ಕೂ ಹೆಚ್ಚು ಬಗರ್‌ಹುಕುಂ ಸಾಗುವಳಿದಾರರು 27,650 ಎಕರೆಗೂ ಹೆಚ್ಚು ಭೂಮಿಯನ್ನು ಬಗರ್‌ಹುಕುಂ ಸಾಗುವಳಿ ಮಾಡುತ್ತಿದ್ದಾರೆ~ ಎಂದರು.ಇದರ ಹಿನ್ನೆಲೆಯಲ್ಲಿ ಭೂಮಿಯ ಹಕ್ಕುಪತ್ರಗಳಿಗಾಗಿ ಹಲವು ವರ್ಷಗಳಿಂದ ಮನವಿ ಪತ್ರ ಸಲ್ಲಿಸುತ್ತಿದ್ದರೂ ಯಾವುದೇ ಮಾನ್ಯತೆ ಸಿಕ್ಕಿಲ್ಲ. ಚಳವಳಿ, ಪ್ರತಿಭಟನೆ, ಧರಣಿ ಮುಂತಾದವು ಗಳನ್ನು ಮಾಡಿದರೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಆರೋಪಿಸಿದರು.ಮನವಿಪತ್ರ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಪಿ.ಬಚ್ಚೇಗೌಡ, `ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯುತ್ತೇನೆ. ಹಲವು ವರ್ಷಗಳಿಂದ ಹಕ್ಕುಪತ್ರಗಳಿಗಾಗಿ ಮನವಿ ಮಾಡುತ್ತಿರುವ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸು ತ್ತೇನೆ~ ಎಂದರು. ವೇದಿಕೆ ಕಾರ್ಯದರ್ಶಿ ಚಾಂದಬಾಷಾ, ಖಜಾಂಚಿ ಎಸ್. ಅಶ್ವತ್ಥ್ ಮತ್ತಿತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.