ಬೆಂಗಳೂರು: ಥಣಿಸಂದ್ರ ಭೂಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯನ್ನು ಅಂಗೀಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಮೇ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಿ.ಚನ್ನಿಗಪ್ಪ, ಭೂಮಿಯ ಮೂಲ ಮಾಲೀಕರಾದ ಡಾ.ಎ.ವಿ.ರವಿಪ್ರಕಾಶ್ ಮತ್ತು ಎ.ವಿ.ಶ್ರೀರಾಂ ಅವರಿಗೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅರ್ಕಾವತಿ ಬಡಾವಣೆಗಾಗಿ ಥಣಿಸಂದ್ರ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡಿದ್ದ 3.08 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿ ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿಯ ಮಹದೇವಸ್ವಾಮಿ ಖಾಸಗಿ ದೂರು ಸಲ್ಲಿಸಿದ್ದರು.

ನ್ಯಾಯಾಲಯದ ಆದೇಶದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಕುಮಾರಸ್ವಾಮಿ, ಚನ್ನಿಗಪ್ಪ, ರವಿಪ್ರಕಾಶ್ ಮತ್ತ ಶ್ರೀರಾಂ ವಿರುದ್ಧ ಏ. 16ರಂದು ಆರೋಪಪಟ್ಟಿ ಸಲ್ಲಿಸಿದ್ದರು. ಶನಿವಾರ ಖಾಸಗಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಆರೋಪಪಟ್ಟಿಯನ್ನು ಸ್ವೀಕರಿಸಿರುವುದಾಗಿ ಪ್ರಕಟಿಸಿದರು. ಮೇ 21ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು, ವಿಚಾರಣೆಗೆ ಹಾಜರಾಗುವಂತೆ ಎಲ್ಲ ನಾಲ್ವರು ಆರೋಪಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶಿಸಿದರು.

ಈ ಮಧ್ಯೆಯೇ ನ್ಯಾಯಾಲಯಕ್ಕೆ ಹಾಜರಾದ ಚನ್ನಿಗಪ್ಪ, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು. ನಿರೀಕ್ಷಣಾ ಜಾಮೀನು ಕೋರುತ್ತಿರುವುದರ ಉದ್ದೇಶ ಕುರಿತು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಧೀಶರು, ಅರ್ಜಿಯನ್ನು ಅಂಗೀಕರಿಸುವ ಸಂಬಂಧ ಯಾವುದೇ ತೀರ್ಮಾನ ಪ್ರಕಟಿಸಲಿಲ್ಲ.

ಮೇ 25ರಂದು ಆದೇಶ: ಬನಶಂಕರಿ ಐದನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಕಾನೂನು ಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಆರೋಪದ ಮೇಲೆ ಕುಮಾರಸ್ವಾಮಿ ಮತ್ತು ಇತರರ ವಿರುದ್ಧ ಮಹದೇವಸ್ವಾಮಿ ಸಲ್ಲಿಸಿರುವ ಮತ್ತೊಂದು ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಕುರಿತು ನ್ಯಾಯಾಲಯ ಮೇ 25ಕ್ಕೆ ಆದೇಶ ಪ್ರಕಟಿಸಲಿದೆ.

ಬಿಎಸ್ವೈಗೆ ಮತ್ತೊಂದು ಸಮನ್ಸ್: ವಕೀಲ ಸಿರಾಜಿನ್ ಬಾಷಾ ಸಲ್ಲಿಸಿದ್ದ ಐದನೇ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿದ ವಿಶೇಷ ನ್ಯಾಯಾಲಯ, ಮೇ 24ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರರಿಗೆ ಸಮನ್ಸ್ ಜಾರಿಗೊಳಿಸುವಂತೆ ಶನಿವಾರ ಆದೇಶ ಹೊರಡಿಸಿದೆ.

ಎಚ್ಎಸ್ಆರ್ ಬಡಾವಣೆಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರು ವುದು ಮತ್ತು ಆದರ್ಶ ಡೆವಲಪರ್ಸ್ನಿಂದ ಲಂಚ ಪಡೆದಿರುವ ಆರೋಪ ಈ ದೂರಿನಲ್ಲಿದೆ. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಆರ್.ಎನ್.ಸೋಹನ್ಕುಮಾರ್, ಆದರ್ಶ ಡೆವಲಪ ರ್ಸ್ನ ಬಿ.ಎಂ.ಜಯಶಂಕರ್ ಮತ್ತು ಬಿ.ಎಂ.ಕರುಣೇಶ್ ಅವರಿಗೂ ಈ ಪ್ರಕರಣದಲ್ಲಿ ಸಮನ್ಸ್ ಜಾರಿಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.