ಭೂಹಗರಣ: ನಿರಾಣಿ ವಿರುದ್ಧ ಎಫ್‌ಐಆರ್

7

ಭೂಹಗರಣ: ನಿರಾಣಿ ವಿರುದ್ಧ ಎಫ್‌ಐಆರ್

Published:
Updated:

ಬೆಂಗಳೂರು: ಭೂಹಗರಣದಲ್ಲಿ ಸಿಲುಕಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಿದ್ದಾರೆ.ನಿರಾಣಿ ವಿರುದ್ಧ ಉದ್ಯಮಿ ಆಲಂ ಪಾಷಾ ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಾಗಿದೆ.ನಿರಾಣಿ ಅವರ ಜೊತೆ, ಅವರ ಸಹೋದರ ಎಚ್.ನಿರಾಣಿ ಹಾಗೂ ಶಾಂತ, ಕಿರಿಯಣ್ಣನವರ್, ಶರಣಬಸಪ್ಪ, ಬೇಗೂರು ರುದ್ರಮೂರ್ತಿ, ಪೂರ್ಣಚಂದ್ರ, ಮೋಹನ ಹಿರೇಮಠ ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಲೋಕಾಯುಕ್ತ ಎಸ್ಪಿ ಶಿವಶಂಕರ್ ತನಿಖೆ ಆರಂಭಿಸಿದ್ದಾರೆ.  ಕೆಲವು ಕಂಪೆನಿಗಳಿಗೆ ಕಾನೂನುಬಾಹಿರವಾಗಿ ಭೂಮಿ ಹಂಚಿಕೆ ಮಾಡಿದ್ದಾರೆ, ನಿಯಮ ಉಲ್ಲಂಘಿಸಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ ಎಂಬಿತ್ಯಾದಿ ಆರೋಪಗಳು ನಿರಾಣಿ ಅವರ  ಮೇಲಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry