ಬೆಂಗಳೂರು: ‘ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಸರ್ಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರಿ ಜಮೀನನ್ನು ವಶಪಡಿಸಿಕೊಳ್ಳಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟಕ ಹೆಣ್ಣೂರು ಶ್ರೀನಿವಾಸ್ ಒತ್ತಾಯಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಕಮ್ಮನಹಳ್ಳಿ ಗ್ರಾಮದ ಸರ್ವೆ ನಂ. 20 ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಸುಮಾರು 45 ಎಕರೆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿದ್ದಾರೆ’ ಎಂದು ಆರೋಪಿಸಿದರು.

‘ದಾಖಲೆ ಪ್ರಕಾರ 109.09 ಎಕರೆ ಜಮೀನಿದ್ದು ಮೂಲತಃ ಇದು ಸರ್ಕಾರಿ ಗೋಮಾಳ ಆಗಿದೆ. ಇದರಲ್ಲಿ 14 ಜನರಿಗೆ ಒಟ್ಟು 57 ಎಕರೆ 14 ಗುಂಟೆ ಜಮೀನನ್ನು ಇನಾಂ ವಿಶೇಷ ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ಆದರೆ, ಉಳಿದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ’ ಎಂದರು.
‘ಭೂಮಿಯನ್ನು ಕಬಳಿಸಲು ಸಹಾಯ ಮಾಡುತ್ತಿರುವ ಕಂದಾಯ ಅಧಿಕಾರಿಗಳ ಮೇಲೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇವರಿಗೆ ಬೆಂಬಲವನ್ನು ನೀಡುತ್ತಿದ್ದಾರೆ’ ಎಂದು ಈ ಸಂದರ್ಭದಲ್ಲಿ ಅವರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.