ಶನಿವಾರ, ಮೇ 15, 2021
24 °C

`ಭೂ ಕಬಳಿಕೆ: ಶಾಸಕರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಅಕ್ರಮ ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಶಾಸಕರಾದ ಡಿ.ಎನ್.ಜೀವರಾಜ್, ರಮೇಶ್‌ಕುಮಾರ್, ಎಚ್.ಡಿ.ರೇವಣ್ಣ ಮತ್ತು ಉದ್ಯಮಿ ಸಿದ್ಧಾರ್ಥ ಅವರ ವಿರುದ್ಧ ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು' ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ತಿಳಿಸಿದರು.ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಎನ್.ಜೀವರಾಜ್ ಅವರು ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಿ ಅಧಿಕೃತಗೊಳಿಸುವ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ ಮತ್ತು ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಸರ್ಕಾರಿ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ ಎಂದರು.ಈ ಕುರಿತು ಸರ್ಕಾರಿ ಜಮೀನು ಸಂರಕ್ಷಣಾ ಕಾರ್ಯಪಡೆಯ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಾಲಸುಬ್ರಮಣಿಯನ್ ಅವರು ಉಪ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಅದನ್ನು ಆಧರಿಸಿ ದೂರು ದಾಖಲಿಸಲಾಗುವುದು ಎಂದು ಹೇಳಿದರು.ಉದ್ಯಮಿ ಸಿದ್ಧಾರ್ಥ ಅವರು ಭೈರಸಂದ್ರ ಕೆರೆಯನ್ನು ಒತ್ತುವರಿ ನಡೆಸಿದ್ದಾರೆ. ಎಚ್.ಡಿ.ರೇವಣ್ಣ ಅವರು ಬಗರ್‌ಹುಕ್ಕುಂ ಜಮೀನನ್ನು ಕಬಳಿಸಿದ್ದಾರೆ. ರಮೇಶ್‌ಕುಮಾರ್ ಅವರು ಅರಣ್ಯ ಇಲಾಖೆಯ ಭೂಮಿಯಲ್ಲಿ ಒತ್ತುವರಿ ನಡೆಸಿದ್ದಾರೆ ಎಂದು ಆಪಾದಿಸಿದರು.ಶಾಸಕ ಡಿ.ಕೆ.ಶಿವಕುಮಾರ್ ಅವರು ನಡೆಸಿರುವ ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಭೂ ಕಬಳಿಕೆ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.