ಭೂ ಸುಧಾರಣೆ: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಚರ್ಚೆ ಸಾಧ್ಯತೆ

ಭಾನುವಾರ, ಮೇ 19, 2019
33 °C

ಭೂ ಸುಧಾರಣೆ: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಚರ್ಚೆ ಸಾಧ್ಯತೆ

Published:
Updated:

ನವದೆಹಲಿ (ಐಎಎನ್‌ಎಸ್): ಭೂ ಸುಧಾರಣೆ ವಿಚಾರಗಳು, ಭೂ ದಾಖಲೆಗಳ ಆಧುನೀಕರಣ, ಕಂದಾಯ ಆಡಳಿತದ ನವೀಕರಣ ಕುರಿತು ಚರ್ಚಿಸಲು ಪ್ರಧಾನಿ ಮನಮೋಹನ್ ಸಿಂಗ್ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವ ಸಾಧ್ಯತೆ ಇದೆ.`ಭೂ ಸುಧಾರಣಾ ವಿಷಯಗಳು ಆಯಾಯ ರಾಜ್ಯಕ್ಕೆ ಸೇರಿದ್ದಾಗಿರುವುದರಿಂದ ಇದಕ್ಕೆ ಸಂಬಂಧಪಟ್ಟ ಎಲ್ಲ ವಿಚಾರಗಳೂ ಸಭೆಯಲ್ಲಿ ಚರ್ಚೆಗೆ ಬರಲಿವೆ~ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಶನಿವಾರ ಹೇಳಿದ್ದಾರೆ.ಯಾವುದೇ ಭೂ ಸುಧಾರಣಾ ಕಾರ್ಯಕ್ರಮಗಳಿಗೆ ಭೂ ದಾಖಲೆಗಳ ಪರಿಷ್ಕರಣೆ ಅಗತ್ಯವಾಗಿರುವುದರಿಂದ ಮತ್ತು ಅದರಲ್ಲೂ ಮುಖ್ಯವಾಗಿ ಬುಡಕಟ್ಟು ಪ್ರಾಂತ್ಯಗಳಲ್ಲಿ ಸ್ಥಳೀಯ ಆಡಳಿತವೇ ಈ ಕೆಲಸವನ್ನು ಮಾಡಬೇಕಾಗಿರುವುದರಿಂದ ಎಲ್ಲ ರಾಜ್ಯಗಳನ್ನೂ ಒಂದೆಡೆ ಸೇರಿಸುವ ಅಗತ್ಯವಿದೆ ಎಂದು ರಮೇಶ್ ಹೇಳಿದ್ದಾರೆ. ರಾಜ್ಯಗಳಲ್ಲಿ ಭೂ ದಾಖಲೆಗಳ ಆಧುನೀಕರಣ ಕಾರ್ಯ ತುಂಬಾ ನಿಧಾನವಾಗಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry