ಶನಿವಾರ, ಜನವರಿ 18, 2020
25 °C

ಭೂ ಸ್ವಾಧೀನ: ಮಾತಿನ ಚಕಮಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹೊರ ವಲಯದ ಗೊಟ್ಟಿಗೆರೆ ಬಳಿ `ನೈಸ್~ ರಸ್ತೆಗಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾದ ನೈಸ್ ಅಧಿಕಾರಿಗಳಿಗೆ ಭೂ ಮಾಲೀಕರು ತಡೆಯೊಡ್ಡಿ ಪ್ರತಿಭಟನೆ ನಡೆಸಲು ಯತ್ನಿಸಿದ್ದರಿಂದ ಸ್ಥಳದಲ್ಲಿ ಶನಿವಾರ ಬೆಳಿಗ್ಗೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ನೈಸ್ ಅಧಿಕಾರಿಗಳು ಯಾವುದೇ ನೋಟಿಸ್ ನೀಡದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದ ಭೂ ಮಾಲೀಕರು, ಶೆಡ್‌ಗಳ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮತ್ತು ಭೂ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಉಂಟಾಯಿತು.ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದಾಗ ಭೂ ಮಾಲೀಕರೊಂದಿಗೆ ತಳ್ಳಾಟ ಉಂಟಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಯಿತು. ಈ ಹಂತದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿ ನಿಯಂತ್ರಿಸಿದರು. ನಂತರ ನೈಸ್ ಅಧಿಕಾರಿಗಳು ಹಲವು ಶೆಡ್‌ಗಳು ಹಾಗೂ ತೆಂಗಿನ ಮರಗಳನ್ನು ತೆರವುಗೊಳಿಸಿ ಭೂಮಿ ಸ್ವಾಧೀನಪಡಿಸಿಕೊಂಡರು.

ಪ್ರತಿಕ್ರಿಯಿಸಿ (+)