ಭಾನುವಾರ, ಫೆಬ್ರವರಿ 28, 2021
23 °C
ಸಿ.ಎಂ. ಕುಟುಂಬದಿಂದ ಆಯೋಜನೆ

ಭೋಜನ ಕೂಟದಲ್ಲಿ ಸಾವಿರಾರು ಜನ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಜನ ಕೂಟದಲ್ಲಿ ಸಾವಿರಾರು ಜನ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ‘ಕಾವೇರಿ ನಿವಾಸ’ದಲ್ಲಿ ಭಾನುವಾರ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಕಾಂಗ್ರೆಸ್‌ ಹಿರಿಯ ಮುಖಂಡ ಸಿ.ಕೆ. ಜಾಫರ್‌ ಷರೀಫ್‌, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ, ಶಾಸಕ ಎಚ್‌.ಡಿ. ರೇವಣ್ಣ, ಸಿದ್ದರಾಮಯ್ಯ ಮಂತ್ರಿಮಂಡಲದ ಬಹುತೇಕ ಸಚಿವರು, ವಿವಿಧ ಪಕ್ಷಗಳ ಶಾಸಕರು ಹಾಗೂ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು.ಸಸ್ಯಾಹಾರ ಮತ್ತು ಮಾಂಸಾಹಾರಿಗಳಿಗೆ ಪ್ರತ್ಯೇಕ  ಕೌಂಟರ್‌ಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ಮುಖ್ಯಮಂತ್ರಿ ಕುಟುಂಬದ ಮೂಲಗಳು ತಿಳಿಸಿವೆ.ಮೈಸೂರಿನಿಂದ ಸಿದ್ದರಾಮಯ್ಯ ಅವರ ಬಂಧು–ಬಳಗದವರು  ಬಂದಿದ್ದರು. ಸ್ವಗ್ರಾಮದಿಂದ ಬಂದಿದ್ದ ಜನ ರಾಕೇಶ್‌ ಸಿದ್ದರಾಮಯ್ಯ ಅವರನ್ನು ನೆನೆದು ಕಣ್ಣೀರು ಹಾಕಿದಾಗ, ಸಿದ್ದರಾಮಯ್ಯ ಅವರೇ  ಸಮಾಧಾನಪಡಿಸಿದರು.ಸಾಲುಗಟ್ಟಿದ ವಾಹನ: ಭೋಜನ ಕೂಟಕ್ಕೆ ಆಗಮಿಸುವವರೆಲ್ಲರೂ ಬಹುತೇಕ ಕಾರುಗಳಲ್ಲೇ  ಬಂದಿದ್ದರಿಂದ ಶಿವಾನಂದ ವೃತ್ತದಿಂದ ವಿಂಡ್ಸರ್‌ ಮ್ಯಾನರ್‌ ವೃತ್ತದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಚಿವರ ಕಾರುಗಳಿಗೆ ಮಾತ್ರ ಕಾವೇರಿ ಪ್ರವೇಶದ್ವಾರದವರೆಗೂ ಅವಕಾಶ ಇತ್ತು. ಗಾಲ್ಫ್‌ ಕೋರ್ಸ್‌ ಸುತ್ತಮುತ್ತ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.