ಶನಿವಾರ, ಮೇ 8, 2021
19 °C

`ಭೌತಿಕ ಶಿಕ್ಷಣದ ಜತೆಗೆ ಅಧ್ಯಾತ್ಮ ಅರಿವು ಅಗತ್ಯ'

ಪ್ರಜಾವಾಣಿ ವಾರ್ತೆ: Updated:

ಅಕ್ಷರ ಗಾತ್ರ : | |

ಯಲಹಂಕ: ಭೌತಿಕ ಶಿಕ್ಷಣದ ಜತೆಗೆ ಅಧ್ಯಾತ್ಮ ಅರಿವು ಮನುಷ್ಯನಿಗೆ ಪ್ರಾಪ್ತವಾದರೆ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಬಾಳೆಹೊನ್ನೂರಿನ ರಂಭಾಪುರಿ ಮಠದ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.ಅಟ್ಟೂರು ಬಡಾವಣೆಯ ವಿಶ್ವೇಶ್ವರಸ್ವಾಮಿ ದೇವಾಲಯದ ಕುಂಭಾಭಿಷೇಕ ಮತ್ತು ಗೋಪುರ ಕಳಸಾರೋಹಣ ಮಹೋತ್ಸವ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಮನುಷ್ಯನ ಬುದ್ಧಿಶಕ್ತಿ ಮತ್ತು ಧರ್ಮದಿಂದ ಭಾವನೆಗಳು ಬೆಳೆಯುತ್ತವೆ. ಹಾಗೆಯೇ ಧರ್ಮಸಾಧನೆಗೆ ಆರೋಗ್ಯವೂ ಸಹ ಬಹಳ ಮುಖ್ಯ ಎಂದು ಸಲಹೆ ನೀಡಿದರು.ಆತಂಕ ದೂರ ಮಾಡಲು ಮನವಿ: ಇತ್ತೀಚೆಗೆ ಕರ್ನಾಟಕ ಸರ್ಕಾರ ಗುಟಕಾ ನಿಷೇಧ ಮಾಡಿರುವುದು ಸ್ವಾಗತಾರ್ಹ. ಆದರೆ ಇದರಿಂದ ಅಡಿಕೆ ಬೆಳೆಗಾರರಿಗೆ ಆಗುವ ತೊಂದರೆಯ ಬಗ್ಗೆ ಆತಂಕವಿದೆ. ಇದನ್ನು ದೂರಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಿಪಟೂರಿನ ಕಾಡಸಿದ್ಧೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ, ಕೊರಟಗೆರೆಯ ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶಿವಗಂಗೆಯ ಮೇಲಣಗವಿ ಮಠದ  ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.