ಭಾನುವಾರ, ಜನವರಿ 19, 2020
29 °C

ಭ್ರಷ್ಟರು ಬಿಜೆಪಿ ತೆಕ್ಕೆಗೆ: ದಿಗ್ವಿಜಯ್‌ಸಿಂಗ್ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆ (ಎನ್‌ಆರ್‌ಎಚ್‌ಎಂ) ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಉತ್ತರ ಪ್ರದೇಶದ ಮಾಜಿ ಸಚಿವ ಬಾಬು ಸಿಂಗ್ ಕುಶ್ವಾ ಅವರು ಬಿಜೆಪಿಗೆ ಸೇರ್ಪಡೆಯಾಗಿರುವ ಕುರಿತು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದರು.ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಕುಶ್ವಾ ಅವರು ಮಾಯಾವತಿ ಸಂಪುಟದಲ್ಲಿ ಸಚಿವರಾಗಿದ್ದಾಗ ಎನ್‌ಆರ್‌ಎಚ್‌ಎಂ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇದೆ. ಅಂಥವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ~ ಎಂದು ಟೀಕಿಸಿದರು.`ಹಗರಣದ ಕುರಿತು ಸಿಬಿಐ ತನಿಖೆ ನಡೆಯುತ್ತಿದೆ. ಇದು ತಿಳಿದಿದ್ದರೂ ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಕ್ವಿ ಅವರು ಕುಶ್ವಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ. ನಕ್ವಿಯವರಿಗೆ ನಾಚಿಕೆಯಾಗಬೇಕು~ ಎಂದು ಹೇಳಿದರು.`ಏನನ್ನುತ್ತಾರೆ ಅಣ್ಣಾ?~: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮತ್ತು ಅವರ ತಂಡದ ಸದಸ್ಯರು ಬಿಜೆಪಿಯ ಭ್ರಷ್ಟಾಚಾರಗಳ ಕುರಿತು ಏಕೆ ಮಾತನಾಡುತ್ತಿಲ್ಲ? ಕುಶ್ವಾ ಅವರ ಪ್ರಕರಣದ ಕುರಿತು ಅಣ್ಣಾ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ ಅವರು, `ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಕುರಿತೂ ಅಣ್ಣಾ ತಂಡದ ಸದಸ್ಯರು ಮೌನವಹಿಸಿದ್ದರು~ ಎಂದರು.

ಪ್ರತಿಕ್ರಿಯಿಸಿ (+)