ಬೀದರ್: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುವಂತೆ ಅಂಬೇಡ್ಕರ್ ಯುವ ಸೇನೆ ಒತ್ತಾಯಿಸಿದೆ.ಸೇನೆಯ ಜಿಲ್ಲಾ ಅಧ್ಯಕ್ಷ ರಾಜಕುಮಾರ ಗುನ್ನಳ್ಳಿ ಮತ್ತಿತರರನ್ನು ಒಳಗೊಂಡ ನಿಯೋಗಈ ಕುರಿತು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.

ಶಾಲಾ ಕೋಣೆ, ಶಿಕ್ಷಕರ ಕೊರತೆ ನೀಗಿಸಬೇಕು. ಬಡವರಿಗೆ ಭಾಗ್ಯಲಕ್ಷ್ಮಿ ಬಾಂಡ ಸುಲಭವಾಗಿ ವಿತರಿಸಬೇಕು. ಗ್ರಾಮೀಣ ರಸ್ತೆಗಳನ್ನು ಡಾಂಬರೀಕರಣಗೊಳಿಸಬೇಕು.ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೈಗೊಳ್ಳಲು ನೆರವು ಒದಗಿಸಬೇಕು. ಬಿಸಿಯೂಟ ಯೋಜನೆಗೆ ಎಲ್ಲ ಸೌಕರ್ಯ ಒದಗಿಸಬೇಕು. ವಿಧವಾ, ವೃದ್ಧಾಪ್ಯ, ಅಂಗವಿಕರಿಗೆ ನೇರ ಮಾಸಾಶನ ಕೈಸೇರುವಂತೆ ವ್ಯವಸ್ಥೆ ಮಾಡಬೇಕು. ಶೇ. 18 ರಷ್ಟು ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ವಿತರಿಸಬೇಕು.

ಜಿಲ್ಲೆಯ ಪ್ರತಿ ಸಮುದಾಯ ಭವನಗಳಲ್ಲಿ ಅಂಬೇಡ್ಕರ್ ಮೂರ್ತಿ ಸ್ಥಾಪಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದ್ದಾರೆ.ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಲಿವಾನ ಹಳೆಂಬುರೆ, ಬೀದರ್ ದಕ್ಷಿಣ ಅಧ್ಯಕ್ಷ ಶಿವಕುಮಾರ ದೊಡ್ಡಿ, ಬೀದರ್ ಉತ್ತರ ಅಧ್ಯಕ್ಷ ಪ್ರಭಾಕರ ಭೋಸ್ಲೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಶಿವಕುಮಾರ ಮೊರೆ ಮತ್ತಿತರರು ನಿಯೋಗದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.