ಭ್ರಷ್ಟಾಚಾರದಿಂದ ರಾಜಕೀಯ ಕಲುಷಿತ
ಶಿವಮೊಗ್ಗ: ಭ್ರಷ್ಟಾಚಾರದಿಂದಾಗಿ ಇಂದಿನ ರಾಜಕೀಯ ವ್ಯವಸ್ಥೆ ಕಲುಷಿತವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ನೆಹರು ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದಿನ ರಾಜಕೀಯ ಪರಿಸ್ಥಿತಿ ಬದಲಾಗಿದ್ದು, ರಾಜಕಾರಣಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇದರಿಂದಾಗಿ ಇಂದಿನ ರಾಜಕೀಯ ವ್ಯವಸ್ಥೆ ಕಲುಷಿತವಾಗಿದೆ ಎಂದು ಅಭಿಪ್ರಾಯಪಟ್ಟರು.
ನೆಹರು ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಪ್ರಗತಿಯ ಪಥಕ್ಕೆ ತಂದರು. ಬಾಕ್ರಾನಂಗಲ್ ಯೊಜನೆಯಂತಹ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು, ಆಹಾರ ಉತ್ಪತ್ತಿಗೆ ಹೆಚ್ಚು ಒತ್ತು ನೀಡಿದ್ದರು. ಈ ಮೂಲಕ ದೇಶದ ಆಹಾರ ಭದ್ರತೆಗೆ ಕ್ರಮ ಕೈಗೊಂಡಿದ್ದರು ಎಂದು ಹೇಳಿದರು.
ಇಂದಿನ ರಾಜಕಾರಣಿಗಳು ಯಾವುದೇ ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸದೇ ಹಣ ಮಾಡುವುದೆ ಯೋಜನೆ ಎಂದು ಭಾವಿಸಿ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದೂರಿದರು.
ಎಐಸಿಸಿ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್. ಸತ್ಯ ನಾರಾಯಣ್, ಬ್ಲಾಕ್ ಅಧ್ಯಕ್ಷರಾದ ಪಿ. ರುದ್ರೇಶ್, ಕೆ.ಬಿ. ಪ್ರಸನ್ನ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಕೆ. ರಂಗನಾಥ್, ಉಪಾಧ್ಯಕ್ಷ ಟಿ.ವಿ. ರಂಜಿತ್, ಎನ್ಎಸ್ಯುಐ ಅಧ್ಯಕ್ಷ ಮಧುಸೂಧನ್ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.