ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ

7

ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ

Published:
Updated:

ಚಿಂತಾಮಣಿ: ಕೇಂದ್ರ ಸರ್ಕಾರ ಹಲವು ಭ್ರಷ್ಟಾಚಾರಗಳನ್ನು ಮುಚ್ಚಿ ಹಾಕುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿದರು. ಕೇಂದ್ರ ಸರ್ಕಾರ ತನ್ನ ಕಾಲಾವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಂತ್ರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಿಲ್ಲ.

2ಜಿ ಸ್ಪೆಕ್ಟ್ರಂ ಹಗರಣ ಮುಚ್ಚಿಹಾಕಲು ಈ ಬಾರಿ ಕರೆಯಲಾದ ಟೆಂಡರ್‌ಗೆ ಯಾರೂ ಬಾರದ ರೀತಿಯಲ್ಲಿ ಷಡ್ಯಂತ್ರ ರೂಪಿಸಿ ಟೆಲಿಕಾಂ ಲೈಸೆನ್ಸಗಳಿಗೆ ಬೇಡಿಕೆಯಿಲ್ಲ ಎಂಬ ಷಡ್ಯಂತ್ರ ರೂಪಿಸಿದೆ  ಎಂದು ಆರೋಪಿಸಿದರು.ಸರ್ಕಾರದ ಬೆಲೆಯೇರಿಕೆ ದುಷ್ಪರಿಣಾಮದಿಂದ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದು ದುಸ್ತರಗೊಂಡಿದೆ ಎಂದು ಖಂಡಿಸಿದರು. ಎಬಿವಿಪಿ ಮುಖಂಡರಾದ ಮಂಜುನಾಥರೆಡ್ಡಿ, ಸುರೇಶ್, ನವಾಜ್, ಲಕ್ಷ್ಮಣ್, ಟಿಪ್ಪು ಪ್ರತಿಭಟನೆಯಲ್ಲಿ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry