ಚಿಕ್ಕಮಗಳೂರು:  ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿ ಖಂಡಿಸಿ ಶನಿವಾರ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಸಿಪಿಐ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಪ್ರಬಲ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ರಾಷ್ಟ್ರೀಯ ಮಂಡಳಿ ಕರೆ ಮೇರೆಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ 11ರಿಂದ ಶನಿವಾರ ಬೆಳಿಗ್ಗೆ 11ರವರೆಗೆ ನಡೆಸಿದ ನಿರಶನ ಅಂತ್ಯಗೊಳಿಸಿದ ನಂತರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಯವೈಖರಿ ಖಂಡಿಸಿದರು.

ಭ್ರಷ್ಟಾಚಾರ ನಿವಾರಣೆಗೆ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಪ್ರಬಲ ಲೋಕಪಾಲ ಮಸೂದೆ ಜಾರಿಗೆ ತರಲೇಬೇಕು. ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಕ್ಷಣ ಲೋಕಾಯುಕ್ತ ವರದಿಯನ್ನು ಅಂಗೀಕರಿಸಿ ಭ್ರಷ್ಟರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅದು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕೆಂದು ಒತ್ತಾಯಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಅಮ್ಜದ್, ಸಹ ಕಾರ್ಯದರ್ಶಿ ಜಿ.ರಘು, ವಿಜಯಕುಮಾರ್, ರಾಜ್ಯ ಸಮಿತಿ ಸದಸ್ಯರಾದ ರೇಣುಕಾರಾಧ್ಯ, ರಾಧಾ ಸುಂದರೇಶ್, ತಾಲ್ಲೂಕು ಕಾರ್ಯದರ್ಶಿ ಜಾರ್ಜ್ ಆಸ್ಟಿನ್, ಕೆ.ಗುಣಶೇಖರನ್, ಜಿ.ಆರ್.ವೇದಮೂರ್ತಿ, ಎಸ್.ಕೆ.ದಾನು, ಸಿ.ಗೋವಿಂದರಾಜು, ಕೆರೆಮಕ್ಕಿ ರಮೇಶ್, ಎಚ್.ಕೆ.ಸೋಮೇಗೌಡ ಮುಂತಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.