ಭಾನುವಾರ, ಮೇ 9, 2021
25 °C

ಭ್ರಷ್ಟಾಚಾರವೇ ಚುನಾವಣೆ ವಿಷಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಬಡವರ ನಿರ್ಲಕ್ಷ್ಯ ಹಾಗೂ ನೈತಿಕ ಅಧಃಪತನ ಈ ಉಪಚುನಾವಣೆಯ ವಿಷಯಗಳು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.ಅವರು ನಗರದಲ್ಲಿ ಶುಕ್ರವಾರ ಪಕ್ಷದ ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ್ ನಾಮಪತ್ರ ಸಲ್ಲಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.ಈ ಸರ್ಕಾರ ನೈತಿಕತೆಗೆ ತಿಲಾಂಜಲಿ ಇಟ್ಟಿದೆ. ಜನರಿಗೆ ನೀಡಿದ್ದ ವಚನದಂತೆ ಆಡಳಿತ ನೀಡುವಲ್ಲಿ ಈ ಸರ್ಕಾರ ವಿಫಲವಾಗಿದೆ. ಜನರ ವಿಶ್ವಾಸ, ನಿರೀಕ್ಷೆಗಳನ್ನು ಸುಳ್ಳು ಮಾಡಿದ್ದಲ್ಲದೇ, ರಾಜ್ಯವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿರುವ ಬಿಜೆಪಿ ಈ ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುವರು ಎಂದು ಹೇಳಿದರು.ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಮ್ಮ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಿದೆ. ಜನರ ಕಷ್ಟ, ನೋವಿಗೆ ದನಿಯಾಗಿದೆ. ಇದೇ ವಿಷಯವನ್ನು ಮುಂದಿಟ್ಟುಕೊಂಡು ಈ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡುವುದಾಗಿ ಹೇಳಿದರು.ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ್ ಮಾತನಾಡಿ, ಬಿಜೆಪಿ ಸರ್ಕಾರದ ವೈಫಲ್ಯವೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.ಜನರು ಬದಲಾವಣೆ ಬಯಸಿದ್ದಾರೆ. ಮತದಾರರಲ್ಲಿನ ಹುಮ್ಮಸ್ಸು ನೋಡಿದರೆ ಈ ಉಪಚುನಾವಣೆಯಲ್ಲಿ ತಾವು ಗೆಲ್ಲುವುದು ನಿಶ್ಚಿತ ಎಂದೂ ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಎಚ್.ಕೆ.ಪಾಟೀಲ, ಮಲ್ಲಿಕಾರ್ಜುನ ನಾಗಪ್ಪ, ಬಸವರಾಜ ರಾಯರೆಡ್ಡಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಆಸೀಫ್ ಅಲಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.