ಭಾನುವಾರ, ಜುಲೈ 25, 2021
27 °C

ಭ್ರಷ್ಟಾಚಾರ: ಅನಿರ್ದಿಷ್ಟ ಧರಣಿಗೆ ಮಾಜಿ ಸ್ಪೀಕರ್ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭ್ರಷ್ಟಾಚಾರ: ಅನಿರ್ದಿಷ್ಟ ಧರಣಿಗೆ ಮಾಜಿ ಸ್ಪೀಕರ್ ನಿರ್ಧಾರ

ಮಂಡ್ಯ: ಜಿಲ್ಲೆಯ ಏಳು ತಾಲ್ಲೂಕು ಪಂಚಾಯಿತಿ ಮತ್ತು ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಒತ್ತಾಯಿಸಿ ತಾವು ಅನಿರ್ದಿಷ್ಟ ಧರಣಿ ನಡೆಸುವುದಾಗಿ ಮಾಜಿ ಸ್ಪೀಕರ್ ಕೃಷ್ಣ ಸೋಮವಾರ ತಿಳಿಸಿದ್ದಾರೆ.ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ 2010ನೇ ಸಾಲಿನಲ್ಲಿ ಒಟ್ಟು ರೂ. 2 ಕೋಟಿ ಮೌಲ್ಯದ ಕೃಷಿ ಪರಿಕರ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಜಿಲ್ಲಾ ಪಂಚಾಯಿತಿಯ ಹಿಂದಿನ ಸಿಇಒ ರಬೀಂದ್ರ ಮತ್ತು ಉಪ ಕಾರ್ಯದರ್ಶಿಯಾಗಿದ್ದ ಚಂದ್ರಪ್ಪ ಅವರ ನೇರ ಪಾತ್ರವಿದೆ ಎಂದು ಆರೋಪಿಸಿದರು.ನಿಯಮಾನುಸಾರ ಟೆಂಡರ್ ಕರೆಯದೇ, ಜಾಹೀರಾತು ನೀಡದೇ ಚಿತ್ರದುರ್ಗ ಮೂಲದ ಸಂಸ್ಥೆಯಿಂದ ಖರೀದಿ ಮಾಡಲಾಗಿದೆ. ಖರೀದಿ ಪ್ರಕ್ರಿಯೆ ನಾಲ್ಕೈದು ದಿನಗಳಲ್ಲಿ ಮುಗಿಸಲಾಗಿದೆ. ಪ್ರಕರಣದ ತನಿಖೆ ನಡೆಸಿರುವ ಹಾಲಿ ಸಿಇಒ ಸರ್ಕಾರಕ್ಕೆ ವರದಿ ಸಲ್ಲಿಸಿ ತಿಂಗಳೇ ಕಳೆದಿದ್ದರೂ ಕ್ರಮ ಜರುಗಿಸಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತರಾಟೆಗೆ ತೆಗೆದುಕೊಂಡರು.ಅಲ್ಲದೆ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮ ಮೀರಿ ಅಧಿಕಾರಿಗಳು, ಜನ ಪ್ರತಿನಿಧಿಗಳೂ ಸೇರಿದಂತೆ 107 ನಿವೇಶನಗಳು ಹಂಚಿಕೆ ಆಗಿದ್ದು, ಇದರಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಈ ಎರಡೂ ಪ್ರಕರಣಗಳ ಬಗ್ಗೆ ಒಂದು ತಿಂಗಳಲ್ಲಿ ಕ್ರಮ ಜರುಗಿಸದಿದ್ದರೆ ನಿರಶನ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.