ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ತೆಂಕನಿಡಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಸ್ವಜನಪಕ್ಷಪಾತದಲ್ಲಿ ತೊಡಗಿರುವ ಪಂಚಾಯಿತಿ ಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಗಮನ ನೀಡುತ್ತಿಲ್ಲ. ಅಲ್ಲದೆ ತಪ್ಪು ಮಾಹಿತಿಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸು ತ್ತಿದ್ದಾರೆ. ನೀರಿನ ಪೈಪ್ ಅಳವಡಿಕೆ ಕಾಮಗಾರಿ ಬಗ್ಗೆ ಚರ್ಚೆ ನಡೆಸದೆ ಏಕಾಏಕಿ ಪೈಪ್ ಅಳವಡಿಸ ಲಾಗುತ್ತಿದೆ. ಬೀದಿ ದೀಪಗಳನ್ನು ಅಸಮರ್ಪಕವಾಗಿ ಅಳವಡಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ಕೆ.ರಘುಪತಿ ಭಟ್ ಭೇಟಿ ನೀಡಿದರು. ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಸುರೇಶ ನಾಯಕ್, ಸುರೇಶ್ ಶೆಟ್ಟಿ, ಪ್ರಶಾಂತ್ಶೆಟ್ಟಿ, ಪಂಚಾಯಿತಿ ಸದಸ್ಯರಾದ ಕಾವ್ಯ ಶೆಟ್ಟಿ, ಜ್ಯೋತಿ, ಪುಷ್ಪ, ಶಂಕರಪೂಜಾರಿ, ಎಚ್ ರತ್ನಾಕರ ಶೆಟ್ಟಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಲಕ್ಷ್ಮಿ ಭಟ್, ಸುನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಲಾಸ್ ನಾಯಕ್, ಸುಪ್ರಸಾದ್ ಶೆಟ್ಟಿ, ಉಮೇಶ್ ಗಾಣಿಗ, ನಾಗರಾಜ ಗಾಣಿಗ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.