ಭ್ರಷ್ಟಾಚಾರ ಆರೋಪ ಸಚಿವರನ್ನು ಉಚ್ಚಾಟಿಸಿ

7

ಭ್ರಷ್ಟಾಚಾರ ಆರೋಪ ಸಚಿವರನ್ನು ಉಚ್ಚಾಟಿಸಿ

Published:
Updated:

ಬೆಂಗಳೂರು: `ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಜೆಪಿ ಸರ್ಕಾರದ ಸಚಿವರು ಹಾಗೂ ಶಾಸಕರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು~ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಹಲವು ಸಚಿವರು, ಶಾಸಕರು ಅಕ್ರಮಗಳ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಕೆಲ ಸಚಿವರು ಜೈಲಿನಲ್ಲಿದ್ದಾರೆ. ಪಕ್ಷಕ್ಕೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ವಜಾ ಮಾಡಬೇಕು~ ಎಂದು ಕಿಡಿಕಾರಿದರು.`ಜನ ಚೇತನ ಯಾತ್ರೆ ಕೈಗೊಂಡಿರುವ ಅಡ್ವಾಣಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೈತಿಕ ಹಕ್ಕಿಲ್ಲ. ರಾಜ್ಯದಲ್ಲಿ ಅವರದೇ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿದೆ~ ಎಂದು ದೂರಿದರು.ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಕೆಲ ಅಂಶಗಳ ಕುರಿತು ಸ್ಪಷ್ಟನೆ ಕೇಳಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry