ಹಳಿಯಾಳ: `ಪಟ್ಟಣದ ಕಂದಾಯ ಇಲಾಖೆಯಲ್ಲಿ ಈ ಹಿಂದೆ ಭ್ರಷ್ಟಾಚಾರ ಬಹಳಷ್ಟು ಆಗುತ್ತಿದ್ದು. ಇನ್ನು ಮುಂದೆ ಅದು ನಡೆಯದು. ಪ್ರತಿಯೊಬ್ಬ ಸಿಬ್ಬಂದಿಯೂ ನಿಗದಿತ ಸರಿಯಾದ ಸಮಯಕ್ಕೆ ಕಚೇರಿಯಲ್ಲಿ ಉಪಸ್ಥಿತರಿದ್ದು ಕಾರ್ಯನಿರ್ವಹಿಸಬೇಕು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.

ಪಟ್ಟಣದ ಕಂದಾಯ ಇಲಾಖೆ ಆವರಣದಲ್ಲಿ ಭಾನುವಾರ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಆಚರಿಸಿ ಸಸಿಗಳನ್ನು ನೆಟ್ಟ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ ಪರಿಶೀಲಿಸಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದರು.

`ಸಿಬ್ಬಂದಿ ಗ್ರಾಮೀಣ ಭಾಗದಲ್ಲಿ ಕಚೇರಿಗೆ ಕೆಲಸಕ್ಕೆ ತೆರಳಿದಾಗ ಚಲನ ವಲನ ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನೋಂದಾಯಿಸಿ ತೆರಳಬೇಕು' ಎಂದು ಸೂಚಿಸಿದ ಸಚಿವರು, ತಾನು ಆಕಸ್ಮಿಕವಾಗಿ ಕಚೇರಿಗೆ ಭೇಟಿ ನೀಡಿದಾಗ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಗೈರು ಹಾಜರಿಯಾಗಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜುಲೈ 1ರಿಂದ ಪ್ರಾರಂಭವಾಗುವ 1 ರೂಪಾಯಿಗೆ ಒಂದು ಕೆ.ಜಿ.ಯಂತೆ 30 ಕೆ.ಜಿ ಅಕ್ಕಿ ನೀಡುವ ಯೋಜನೆ ಸಮರ್ಪಕವಾಗುವಂತೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಿಸುವಂತೆ ತಹಶೀಲ್ದಾರರಿಗೆ ಆದೇಶಿಸಿದರು.

`ಮುಂಬರುವ 15 ದಿನಗಳಲ್ಲಿ ಪಟ್ಟಣದಲ್ಲಿನ ಸಂಪೂರ್ಣ ಹಂದಿಗಳ ನಿರ್ಮೂಲನೆಯಾಗಬೇಕು. ಹಳಿಯಾಳ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಬಡಾವಣೆಗಳು ಕಾನೂನು ರಿತ್ಯ ಅನುಮೋದನೆಯನ್ನು ಪಡೆದುಕೊಕೊಂಡಿರಬೇಕು. ಮೂಲ ಸೌಕರ್ಯಗಳನ್ನು ಒದಗಿಸಿದ್ದಾರೋ ಎಂಬುವುದನ್ನು ಪರಿಶೀಲಿಸಿ, ಇಲ್ಲವಾದರೇ ಕಾನೂನು ಪ್ರಕಾರ ಕ್ರಮ ಜರುಗಿಸಿ' ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರರಿಗೆ ಆದೇಶ ನೀಡಿದರು.

ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ ವರ್ಗಾವಣೆಯಾದಲ್ಲಿ ಅವರ ಜಾಗೆಯಲ್ಲಿ ಕಾರ್ಯನಿರ್ವಹಿಸಲು ಇನ್ನೊಬ್ಬರು ಸಿಬ್ಬಂದಿ ಬರುವ ವರೆಗೂ ಸ್ಥಾನಿಕ ಸಿಬ್ಬಂದಿಯನ್ನು ಬಿಡುಗಡೆ ಗೊಳಿಸಬಾರದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹಳಿಯಾಳದಲ್ಲಿ ಶೀಘ್ರದಲ್ಲಿ ಉಪ ಕಾರಾಗೃಹ ಕಟ್ಟಡ ನಿರ್ಮಿಸಲು ಯೋಜನೆಯನ್ನು ರೂಪಿಸಿ ಎಂದು ಪೋಲಿಸ್ ಇಲಾಖೆಗೆ ಆದೇಶಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಾಯ ಕಾಮತ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೃಷ್ಣ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚಹ್ವಾಣ, ತಹಶೀಲ್ದಾರ್ಶಾರದಾ ಕೋಲಕಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎ.ಅಂಬೇಕರ, ಡಿ.ಆರ್.ನಾಯ್ಕ, ವಲಯ ಅರಣ್ಯಾಧಿಕಾರಿ ವಿಜಯಕುಮಾರ ಹಾಲಭಾವಿ, ಅಜ್ಜಪ್ಪ ಕುರುಬರ ಮತ್ತಿತರರ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.