ಶುಕ್ರವಾರ, ಮೇ 14, 2021
30 °C

ಭ್ರಷ್ಟಾಚಾರ: ದಿಟ್ಟ ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಪ್ರಧಾನಿ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಪ್ರಾಮಾಣಿಕತೆ ರಕ್ಷಣೆಗೆ ಬದ್ಧರಾಗಿ ಭಷ್ಟ್ರಾಚಾರ ನಿರ್ಮೂಲನೆ ಹೆಸರಿನಲ್ಲಿ ಸರ್ಕಾರದ ವಿರುದ್ಧ ಸೇಡಿನಿಂದ ಹೋರಾಟ ನಡೆಸುತ್ತಿರುವವರನ್ನು ಸಂತುಷ್ಟಗೊಳಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ತೊಡೆದು ಹಾಕಲು ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ಅಧಿಕಾರಿಗಳಿಗೆ ಕರೆನೀಡಿದರು.7ನೇ ನಾಗರಿಕ ಸೇವಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು `ಭ್ರಷ್ಟಾಚಾರ ವಿರುದ್ಧದ ಹೋರಾಟ ನಮ್ಮ ಪ್ರಯತ್ನವಾಗಬೇಕೇ, ಬದಲು ಅದು ಯಾವುದೇ ರಾಜಕೀಯ ಪಕ್ಷಗಳ ಪ್ರಭಾವಕ್ಕೆ ಒಳಗಾಗಿ ಸೇಡಿನ ಹೋರಾಟವಾಗಬಾರದು~ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಅವರು `ಭ್ರಷ್ಟಾಚಾರ ರಹಿತ ಪರಿಸರ ನಿರ್ಮಿಸಲು ಧೃಡ ನಿರ್ಧಾರ ಕೈಗೊಳ್ಳುವಂತೆ ನಮ್ಮ ನಾಗರಿಕ ಸೇವಾಧಿಕಾರಿಗಳನ್ನು ಪ್ರೋತ್ಸಾಹಿಸುವುದಕ್ಕೆ ಸರ್ಕಾರ ಬದ್ಧವಾಗಿದೆ~ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.