ಶನಿವಾರ, ನವೆಂಬರ್ 23, 2019
17 °C

ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ

Published:
Updated:
ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ

ಬೆಂಗಳೂರು: `ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಜನತೆ ಲೋಕಸತ್ತಾ ಪಕ್ಷವನ್ನು ಅಧಿಕಾರಕ್ಕೆ ತರಬೇಕು' ಎಂದು ಪಕ್ಷದ ಸಂಸ್ಥಾಪಕ ಡಾ.ಜಯಪ್ರಕಾಶ್ ನಾರಾಯಣ್ ಹೇಳಿದರು.ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿ ಶಾಂತಲಾ ದಾಮ್ಲೆ ಅವರ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

`ಹಿಂದಿನ ಸರ್ಕಾರಗಳು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸೋತಿವೆ. ರಾಜಕಾರಣ ದಿನದಿಂದಕ್ಕೆ ಹೆಚ್ಚು ಕಲುಷಿತಗೊಳ್ಳುತ್ತಿದೆ. ಸಮಾಜದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಹೀಗಾಗಿ ರಾಜಕಾರಣದಲ್ಲಿ ಬದಲಾವಣೆ ತರುವ ಅಗತ್ಯವಿದೆ. ಹೊಸ ಆಲೋಚನೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಲೋಕಸತ್ತಾ ಪಕ್ಷಕ್ಕೆ ಜನತೆ ಬೆಂಬಲ ನೀಡಬೇಕು' ಎಂದು ಅವರು ಹೇಳಿದರು.

ಶಾಂತಲಾ ದಾಮ್ಲೆ ಮಾತನಾಡಿ, `ಸಮಾಜದಲ್ಲಿ ಭ್ರಷ್ಟಾಚಾರವನ್ನು ಬುಡಮಟ್ಟದಿಂದ ಕಿತ್ತು ಹಾಕಲು ಹಾಗೂ ಉತ್ತಮ ಆಡಳಿತಕ್ಕಾಗಿ ಲೋಕಸತ್ತಾ ಪಕ್ಷಕ್ಕೆ ಮತ ನೀಡಿ' ಎಂದು ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)