ಬೆಂಗಳೂರು: `ಭ್ರಷ್ಟಾಚಾರ ವಿರುದ್ಧದ ಚಳವಳಿಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೇಶದಲ್ಲಿ ಬದಲಾವಣೆ ತರಲು ಸಾಧ್ಯ~ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ ಅಭಿಪ್ರಾಯಪಟ್ಟರು.

`ಯೂತ್ ಎಗೆನೆಸ್ಟ್ ಕರಪ್ಷನ್ ಸಂಘಟನೆ~ಯು ನಗರದ ಪುರಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಭ್ರಷ್ಟಾಚಾರ ವಿರೋಧಿ ಸಮಾವೇಶದಲ್ಲಿ ಅವರು ಮಾತನಾಡಿದರು.`ಮಾಹಿತಿ ಹಕ್ಕು ಕಾಯ್ದೆಯನ್ನು ಭ್ರಷ್ಟಾಚಾರ ವಿರುದ್ಧದ ಹೋರಾಟದ ಅಸ್ತ್ರವಾಗಿ ಸಮರ್ಥವಾಗಿ ಬಳಸಿಕೊಳ್ಳಬೇಕು. ಯುವಕರು ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದರೆ ಉತ್ತಮ ಆಡಳಿತ ನೀಡಬಹುದು~ ಎಂದರು.

`ಸಮಾಜದ ಗಂಭೀರ ಸಮಸ್ಯೆಗಳಿಗೆ ಯುವಕರು ಸ್ಪಂದಿಸಿ ಪರಿಹಾರ ಕಂಡುಕೊಳ್ಳಲು ಯತ್ನಿಸಬೇಕು. ಭ್ರಷ್ಟಾಚಾರವನ್ನು ಬೇರುಸಮೇತ ಕಿತ್ತೊಗೆಯಲು ಎಲ್ಲರೂ ಮುಂದಾಗಬೇಕು~ ಎಂದು ಆರ್ಟ್ ಆಫ್ ಲಿವಿಂಗ್ನ ಪ್ರಸನ್ನ ಪ್ರಭುಜಿ ಹೇಳಿದರು.

ಸಂಘಟನೆ ಮುಖ್ಯಸ್ಥ ಸುವ್ರತ್ಕುಮಾರ್ ಮಾತನಾಡಿ, `ಭ್ರಷ್ಟಾಚಾರ ಮುಕ್ತ ಭಾರತ ಸಂಘಟನೆಯ ಗುರಿಯಾಗಿದೆ. ಸಾವಿರಾರು ಯುವಕರು, ಬುದ್ಧಿ ಜೀವಿಗಳು, ಸಮಾಜ ಸೇವಕರು ಸಂಘಟನೆಗೆ ಬೆಂಬಲ ಸೂಚಿಸುತ್ತಿದ್ದಾರೆ~ ಎಂದರು. ಸಂಘಟನೆಯ ಐನೂರಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.