ಭಾನುವಾರ, ಏಪ್ರಿಲ್ 11, 2021
25 °C

ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಮುಂದಾಗಲು ಯುವಕರಿಗೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ: ರಾಷ್ಟ್ರದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಂಘಟನೆಗಳು ಹೋರಾಟಕ್ಕೆ ಮುಂದಾಗಬೇಕು ಎಂದು ಶಾಸಕ ಪ್ರತಾಪಗೌಡ ಪಾಟೀಲ ಸೋಮವಾರ ಕರೆ ನೀಡಿದರು.ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಪಟ್ಟಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

 

ಕನ್ನಡ ನಾಡಿನ ನೆಲ, ಜಲ ಪ್ರಶ್ನೆ ಎದುರಾದಗ ರಕ್ಷಣಾ ವೇದಿಕೆ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಧ್ವನಿ ಎತ್ತುವ ಮೂಲಕ ನಾಡಿನ ರಕ್ಷಣೆಗಾಗಿ ಕಂಕಣ ಬದ್ಧವಾಗಿವೆ ಎಂದರು. ಕನ್ನಡ ಉಳಿಸಿ ಬೆಳೆಸುವ ಜವಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದ ಅವರು ರಕ್ಷಣಾ ವೇದಿಕೆಯ ಕಾರ್ಯವನ್ನು ಶ್ಲಾಘೀಸಿದರು.ವೇದಿಕೆ ಮಸ್ಕಿ ಕ್ಷೇತ್ರದ ಅಧ್ಯಕ್ಷ ಅಶೋಕ ಮುರಾರಿ ಅಧ್ಯಕ್ಷತೆ ವಹಿಸಿದ್ದರು. ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ಕಾರ್ಯದರ್ಶಿ ಬಸವಂತರಾಯ ಕುರಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಮಸ್ಕಿ, ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅಶೋಕಕುಮಾರ ಜೈನ್, ಜಿಲ್ಲಾ ಪಂಚಾಯ್ತಿ ಸದಸ್ಯ ಮಹಾದೇವಪ್ಪಗೌಡ ಪೊ. ಪಾಟೀಲ ಮಾತನಾಡಿದರು.ಬಿಎಸ್‌ಆರ್ ಪಕ್ಷದ ಮುಖಂಡ ಶೇಖರಪ್ಪ ತಳವಾರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀಶೈಲಪ್ಪ ಬ್ಯಾಳಿ, ಅಪ್ಪಾಜಿಗೌಡ ಪಾಟೀಲ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಂಕ್ರಪ್ಪ ಮೋಚಿ, ಡಾ. ಶಿವಶರಣಪ್ಪ ಇತ್ಲಿ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಡಾ. ಅಹ್ಮದಸಾಬ, ರಕ್ಷಣಾ ವೇದಿಕೆಯ ಸಿಂಧನೂರು ತಾಲ್ಲೂಕು ಅಧ್ಯಕ್ಷ ಅಜೀತ್ ಓಸ್ತವಾಲ್, ವೆಂಕನಗೌಡ ವಟಗಲ್, ವಿಜಯಕುಮಾರ ವಟಗಲ್, ಪೀರಸಾಬ ಶೆಡ್ಮಿ, ಅರುಣಕುಮಾರ, ಎಂಎಂ ದುರಗಪ್ಪ ವೇದಿಕೆ ಮೇಲೆ ಉಪಸ್ಥಿತರಿದ್ದರು.ಕೊನೆಯಲ್ಲಿ ವೆಂಕನಗೌಡ ವಟಗಲ್ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.

ಇದಕ್ಕೂ ಮುಂಚೆ ಕನ್ನಡಾಂಬೆಯ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಅಧ್ಯಕ್ಷ ಅಶೋಕ ಮುರಾರಿ ಸೇರಿದಂತೆ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.