ಭ್ರಷ್ಟಾಚಾರ ವಿರುದ್ಧ ನಿರಂತರ ಹೋರಾಟ

7

ಭ್ರಷ್ಟಾಚಾರ ವಿರುದ್ಧ ನಿರಂತರ ಹೋರಾಟ

Published:
Updated:ಕೊಪ್ಪಳ: ಭ್ರಷ್ಟ ರಾಜಕಾರಣದ ವಿರುದ್ಧ ಯುವ ಶಕ್ತಿ ಹೋರಾಟ ಮಾಡದಿದ್ದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಯುವ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷ ಕೃಷ್ಣ ಬೈರೇಗೌಡ ಎಚ್ಚರಿಸಿದರು.ಅವರು ಸಮೀಪದ ಭಾಗ್ಯನಗರದ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಯುವಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

ಮಾಜ ಹಾಳು ಮಾಡುವವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕು ಎಂದೂ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ವಿಶ್ವರಂಜನ್ ಮೊಹಾಂತಿ ಮಾತನಾಡಿ, ಈ ನೆಲದ ಮಣ್ಣನ್ನು ಲೂಟಿ ಮಾಡುವುದನ್ನು ಬಿಟ್ಟರೆ ಬಿಜೆಪಿ ಸರ್ಕಾರ ಯಾವ ಸಾಧನೆಯನ್ನೂ ಮಾಡಿಲ್ಲ ಎಂದು ದೂರಿದರು.ಶಾಸಕ ಅಮರೇಗೌಡ ಬಯ್ಯಾಪೂರ, ಕೆ.ಬಸವರಾಜ ಹಿಟ್ನಾಳ್, ದೀಪಕ್ ಸಿಂಗ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮುಖಂಡ ಶೇಖರಗೌಡ ಮಾಲಿಪಾಟೀಲ, ನಗರಸಭೆ ಸದಸ್ಯರಾದ ಕಾಟನ್ ಪಾಷಾ, ಮಾನ್ವಿ ಪಾಷಾ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry